fbpx
ಸಮಾಚಾರ

ಆರ್‌ಸಿಬಿಗೆ ಮಾತ್ರವಲ್ಲ ಎಲ್ಲಾ ತಂಡಗಳ ಪರ ಅಪರೂಪದ ವಿಶೇಷ ದಾಖಲೆ ಬರೆದ ದೇವದತ್ ಪಡಿಕ್ಕಲ್!

ತಾನು ಆಡಿದ ಮೊದಲ ಐಪಿಎಲ್‌ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ಕರ್ನಾಟಕದ ರಣಜಿ ಆಟಗಾರ ದೇವದತ್‌ ಪಡಿಕಲ್‌ ಅಪರೂಪದ ಸಾಧನೆ ನಿರ್ಮಿಸಿದ್ದಾರೆ.

ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 20 ವರ್ಷದ ಯುವ ಆರ್‌ಸಿಬಿ ಆಟಗಾರ ಪಡಿಕ್ಕಲ್‌ 36 ಎಸೆತದಲ್ಲಿ ಅರ್ಧಶತಕ ಚಚ್ಚಿ ಅಂತಿಮವಾಗಿ 56 ರನ್‌(42 ಎಸೆತ, 8 ಬೌಂಡರಿ) ಹೊಡೆದು ಔಟಾದರು.

ಇನ್ನು ಐಪಿಎಲ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಪಡಿಕ್ಕಲ್‌, ಪ್ರಥಮ ದರ್ಜೆ ಕ್ರಿಕೆಟ್, ಲಿಸ್ಟ್‌ ‘ಎ’ ಕ್ರಿಕೆಟ್‌ ಮತ್ತು ಟಿ20 ಕ್ರಿಕೆಟ್‌ ಎಲ್ಲದರಲ್ಲೂ ಪದಾರ್ಪಣೆಯ ಪಂದ್ಯಗಳಲ್ಲಿ 50+ ಸ್ಕೋರ್‌ ಮಾಡಿದ ವಿಶೇಷ ದಾಖಲೆ ಹೊಂದಿದ್ದಾರೆ.

ಈ ಮೂಲಕ ತಾನು ಆಡಿದ ಪ್ರಥಮ ದರ್ಜೆ, ಲಿಸ್ಟ್‌ ಎ, ಟಿ 20, ಐಪಿಎಲ್‌ನ ಎಲ್ಲ ಮೊದಲ ಪಂದ್ಯದಲ್ಲಿ ಅರ್ಧಶತಕ ಹೊಡೆದ ಅಪರೂಪದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top