fbpx
ಸಮಾಚಾರ

ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವ ರೈತರನ್ನು ಭಯೋತ್ಪಾದಕರೆಂದ ವಿವಾದಾತ್ಮಕ ನಟಿ ಕಂಗನಾ

ಭಾನುವಾರ ರಾಜ್ಯಸಭೆಯಲ್ಲಿ ಅಂಗೀಕೃತವಾದ ಎರಡು ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆಗೆ ಇಳಿದಿರುವ ಪಂಜಾಬ್‌ ರೈತರನ್ನು ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ‘ಭಯೋತ್ಪಾದಕರು’ ಎಂದು ಕರೆದಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೆ ಇತ್ತ ಟ್ವೀಟ್​ ಮೂಲಕ ತಮ್ಮ ಅಭಿಪ್ರಾಯವನ್ನು ಹೊರಹಾಕಿರುವ ನಟಿ ಕಂಗನಾ, “ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವವರು ಭಯೋತ್ಪಾದರು” ಎಂದು ಜರಿದಿದ್ದಾರೆ.

ಪ್ರಧಾನಿಯವರು ರೈತರಿಗೆ ಮಸೂದೆ ಬಗ್ಗೆ ಭರವಸೆ ನೀಡಿದ್ದ ಟ್ವೀಟ್‌ವೊಂದನ್ನು ಉಲ್ಲೇಖಿಸಿರುವ ಕಂಗನಾ “ಪ್ರಧಾನಿ ಮೋದಿಜೀ, ನಿದ್ರಿಸುತ್ತಿರುವವರನ್ನು ಎಚ್ಚರಗೊಳಿಸಬಹುದು. ತಪ್ಪು ತಿಳವಳಿಕೆ ಇದ್ದರೇ ಅದನ್ನು ಪರಿಹರಿಸಬಹುದು. ಆದರೆ ನಿದ್ದೆ ಮಾಡುವಂತೆ ನಟಿಸುವವರ, ಅರ್ಥ ಮಾಡಿಕೊಳ್ಳದಂತೆ ನಟಿಸುವವರರಿಗೆ ನೀವು ತಿಳಿಸಲು ಪ್ರಯತ್ನಸಿದರೆ ಏನು ಪ್ರಯೋಜನ..? ಇವರು ಅದೇ ಭಯೋತ್ಪಾದಕರು. ಸಿಎಎಯಿಂದ ಯಾರು ಪೌರತ್ವ ಕಳೆದುಕೊಳ್ಳದಿದ್ದರೂ ರಕ್ತದ ಕೋಡಿ ಹರಿಸಿದವರೇ ಇಂದು ಈ ಕೃಷಿ ಮಸೂದೆಯ ವಿರುದ್ಧವೂ ಹೋರಾಡುತ್ತಿದ್ದಾರೆ” ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top