fbpx
ಸಮಾಚಾರ

ಅಭಿಮಾನಿಗಳ ಬಳಿ ಕನ್ನಡದಲ್ಲಿಯೇ ವಿಶೇಷ ಮನವಿ ಮಾಡಿಕೊಂಡ RCB ಸ್ಟಾರ್ ದೇವದತ್ ಪಡಿಕ್ಕಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಅಮೋಘ ಪ್ರದರ್ಶನ ತೋರುವುದರ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ 10 ರನ್‌ಗಳ ಗೆಲುವು ದಾಖಲಿಸಿದೆ.

ಇನ್ನು ತಾನು ಆಡಿದ ಮೊದಲ ಐಪಿಎಲ್‌ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಕನ್ನಡಿಗ ದೇವದತ್ ಪಡಿಕ್ಕಲ್ ಕ್ರಿಕೆಟ್ ಪ್ರಿಯರ ಗಮನ ಸೆಳೆದಿದ್ದಾರೆ. ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 20 ವರ್ಷದ ಯುವ ಆರ್‌ಸಿಬಿ ಆಟಗಾರ ಪಡಿಕ್ಕಲ್‌ 36 ಎಸೆತದಲ್ಲಿ ಅರ್ಧಶತಕ ಚಚ್ಚಿ ಅಂತಿಮವಾಗಿ 56 ರನ್‌(42 ಎಸೆತ, 8 ಬೌಂಡರಿ) ಹೊಡೆದು ಔಟಾದರು.

 

 

ಪಾದಾರ್ಪಣೆ ಪಂದ್ಯದಲ್ಲೇ ಅಮೋಘ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್, ದುಬೈನಿಂದ ಕರ್ನಾಟಕದ ಅಭಿಮಾನಿಗಳಿಗೆ ಕನ್ನಡದಲ್ಲೇ ವಿಶೇಷ ಸಂದೇಶವೊಂದನ್ನು ರವಾನಿಸಿದ್ದಾರೆ. ಪಂದ್ಯ ಮುಕ್ತಾಯದ ವೇಳೆ ಆರ್‌ಸಿಬಿ ಸ್ಪಿನ್ನರ್ ಯುಜುವೇಂದ್ರ ಚಹಲ್ ಜತೆ ಸಂದರ್ಶನದ ವೇಳೆ ಕನ್ನಡಿಗರಲ್ಲಿ ದೇವದತ್ ಪಡಿಕ್ಕಲ್ ತಮ್ಮ ತಂಡಕ್ಕೆ ಹೀಗೆ ಸಫೋರ್ಟ್ ಮಾಡಿ ಎಂದು ಕನ್ನಡದಲ್ಲಿಯೇ ಮನವಿ ಮಾಡಿಕೊಂಡಿದ್ದಾರೆ.

 

 

ಅಭಿಮಾನಿಗಳಲ್ಲಿ ವಿಶೇಷ ಮನವಿ:
ಎಲ್ಲರೂ ಆರ್‌ಸಿಬಿಗೆ ಸಪೋರ್ಟ್‌ ಮಾಡ್ತಾ ಇರಿ. ಮೊದಲ ಮ್ಯಾಚ್ ತುಂಬಾ ಚೆನ್ನಾಗಿತ್ತು. ಮುಂದೇಯೂ ಹೀಗೆ ಇರುತ್ತೆ ಎಂದು ಭಾವಿಸುತ್ತೇನೆ. ನೀವು ಸಪೋರ್ಟ್ ಮಾಡ್ತಾ ಇರಿ, ನಾವು ಹಿಂಗೆ ಆಡ್ತಾ ಇರ್ತೀವಿ ಎಂದು ಪಡಿಕ್ಕಲ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top