fbpx
ಸಮಾಚಾರ

535 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ತನ್ನ ಅಧಿಕೃತ ವೆಬ್ ತಾಣದಲ್ಲಿ 2020ನೇ ಸಾಲಿನ ಹೊಸ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಸುಮಾರು 535 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27, 2020ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ವಿದ್ಯಾರ್ಹತೆ:
ಪದವಿ/ಮಾಸ್ಟರ್ಸ್ in Math/ Statistics/ ಎಕಾನಾಮಿಕ್ಸ್/ or FRM/ PRM/ DTIRM/ ಎಂಬಿಎ, ಸಿಎ/ ICWA/ CFA/ PGPBF

ವಯೋಮಿತಿ ಅರ್ಹತೆಗಳು
ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು?
ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಕೆಟಗರಿ ಅಭ್ಯರ್ಥಿಗಳು ರೂ.175 ಪಾವತಿಸಬೇಕು. ಇತರೆ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ರೂ.850 ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್‌ ಟೆಸ್ಟ್‌ ಜತೆಗೆ ಸಂದರ್ಶನ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top