fbpx
ಸಮಾಚಾರ

“ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ” ಅನ್ನದಾತನ ಪರ ನಟ ಶ್ರೀಮುರಳಿಯ ಖಡಕ್‌ ಮಾತು

ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತಿವೆ. ಈಗ ನಟ ಶ್ರೀಮುರಳಿ ಸಹ ರೈತರ ವಿಚಾರದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

 

 

‘ಒಂದಲ್ಲೊಂದು ರೂಪದಲ್ಲಿ ನಾವೆಲ್ಲ ಕೃಷಿ ಹಿನ್ನೆಲೆಯಿಂದಲೇ ಬಂದವರು‌. ರಾಜಕಾರಣಿಯೋ, ಕಲಾವಿದರೋ ಅಥವಾ ಉದ್ಯಮಿಯೋ, ಅದು ಯಾರೇ ಆದರೂ ಸರಿ, ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು ಬೆವರು ಹರಿಸಿ ಬೆಳೆ ಬೆಳೆದರೆ ಮಾತ್ರ ನಾವೆಲ್ಲ ಅಚ್ಚುಕಟ್ಟಾಗಿ ಕುಳಿತು ಭೋಜನ ಸವಿಯುವುದು. ಹಾಗಾಗಿ ಯಾರೇ ಆದರೂ ಸರಿ, ರೈತರ ಬಗ್ಗೆ ಅಗೌರವ ತೋರುವುದು ಸರಿಯಲ್ಲ’ ಎಂದು ಶ್ರೀಮುರಳಿ ಟ್ವೀಟ್‌ ಮಾಡಿದ್ದಾರೆ.

ಮಸೂದೆಗಳ ಬಗ್ಗೆ ಸದನದ ಒಳಗೂ, ಹೊರಗೂ ಹಾಗೂ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿದೆ. ಈ ನಡುವೆಯೇ ನಟ ಶ್ರೀಮುರಳಿ ರೈತರ ಬಗ್ಗೆ ಹೇಳಿರುವ ಮಾತುಗಳು ವೈರಲ್‌ ಆಗಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top