fbpx
ಸಮಾಚಾರ

ಕೊರೊನಾ ಸೋಂಕು: ಕಾಂಗ್ರೆಸ್ ಶಾಸಕ ನಾರಾಯಣರಾವ್ ನಿಧನ

ಬಸವ ಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ನಾರಾಯಣರಾವ್ ಅವರಿಗೆ ಆಗಸ್ಟ್ 31ರಂದು ಸೋಂಕು ದೃಢಪಟ್ಟಿತ್ತು. ಆಪ್ತರ ಸಲಹೆಯ ಮೇರೆಗೆ ಸೆಪ್ಟೆಂಬರ್ 1ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರದಲ್ಲಿ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ತೊಂದರೆ ಅನುಭವಿಸಿದ್ದರು. ಕಾಮಾಲೆ, ಅಧಿಕ ರಕ್ತದೊತ್ತಡದಿಂದ ಇನ್ನಷ್ಟು ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮದ್ಯಾಹ್ನ ಕೊನೆಯುಸಿರೆಳೆದಿದ್ದಾರೆ. 66 ವರ್ಷ ವಯಸ್ಸಿನ ನಾರಾಯಣರಾವ್, ಮೈತ್ರಿ ಸರ್ಕಾರದ ವೇಳೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ಬೀದರ್ ಜಿಲ್ಲೆಯ ಬಸವಕಲ್ಯಾಣದ ಶಾಸಕರಾದ ರಾವ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಲ್ಲಿಕಾರ್ಜುನ್ ಖೂಬಾ ಮತ್ತು ಜೆಡಿಎಸ್‌ನ ಪಿಜಿಆರ್ ಸಿಂಧಿಯಾ ಅವರನ್ನು ಸೋಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top