fbpx
ಸಮಾಚಾರ

ಹಿರಿಯ ಪೋಷಕ ನಟ ರಾಕ್​ಲೈನ್ ಸುಧಾಕರ್ ನಿಧನ

ಸ್ಯಾಂಡಲ್​ವುಡ್​​ನ ಖ್ಯಾತ ಪೋಷಕ ನಟ ರಾಕ್​ಲೈನ್​ ಸುಧಾಕರ್​ ವಿಧಿವಶರಾಗಿದ್ದಾರೆ. ಇಂದು ಸಿನಿಮಾ ಶೂಟಿಂಗ್​​ನಲ್ಲಿ ತೊಡಗಿದ್ದ ವೇಳೆ, ಚಿತ್ರೀಕರಣದ ಸ್ಪಾಟ್​​ನಲ್ಲೇ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೆಲ ದಿನಗಳ ಹಿಂದಷ್ಟೇ ಸುಧಾಕರ್​ಗೆ ಕೊರೋನಾ ಸೋಂಕು ತಗುಲಿತ್ತು. ಇದಕ್ಕಾಗಿ ಅವರು ಚಿಕಿತ್ಸೆ ಪಡೆದು ಬಂದಿದ್ದರು. ಅವರು ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಮತ್ತೆ ಶೂಟಿಂಗ್​ ಕೆಲಸಗಳಲ್ಲಿ ಪಾಲ್ಗೊಂಡಿದ್ದರು. ಸಿಂಪಲ್​ ಸುನಿ ನಿರ್ದೇಶನದ ಸಿನಿಮಾ ಶೂಟಿಂಗ್​ ವೇಳೆ ಅವರಿಗೆ ಹೃದಯಾಘತ ಸಂಭವಿಸಿದೆ. ಈ ಕುರಿತು ಖುದ್ದು ಟ್ವೀಟ್ ಮೂಲಕ ನಿರ್ದೇಶಕ ಸುನಿ ಮಾಹಿತಿ ನೀಡಿದ್ದಾರೆ.

 

 

ಪುಷ್ಕರ್‌ ಮಲಿಕಾರ್ಜುನಯ್ಯ ನಿರ್ಮಾಣದ ‘ಶುಗರ್‌ಲೆಸ್‌’ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸುಧಾಕರ್‌ ಮೇಕಪ್‌ ಹಾಕಿಕೊಳ್ಳುತ್ತಿದ್ದಾಗ, ಕುಸಿದು ಬಿದ್ದಿದ್ದಾರೆ, ಸುಮಾರು 10 ಗಂಟೆಗೆ ನಿಧನರಾಗಿದ್ದಾರೆ. ಬೆಂಗಳೂರು ಕಮಲನಗರ ನಿವಾಸಿಯಾಗಿದ್ದ ಸುಧಾಕರ್‌ ಎರಡು ತಿಂಗಳುಗಳ ಹಿಂದೆ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದರು.

ಸ್ಯಾಂಡಲ್‌ವುಡ್‌ ಸ್ಟಾರ್‌ ನಟರ ಸಿನಿಮಾಗಳಲ್ಲಿ ಹೆಚ್ಚಾಗಿ ಅಭಿನಯಿಸಿದ್ದ ಸುಧಾಕರ್‌ ಅವರಿಗೆ ಖ್ಯಾತಿ ತಂದುಕೊಟ್ಟಿದ್ದು ‘ಪಂಚರಂಗಿ’, ‘ಅಧ್ಯಕ್ಷ’, ‘ಅಜಿತ್’, ‘ನಾ ಕೋಳಿಕೇರಂಗ’. ಅಲ್ಲದೇ ಅನೇಕ ಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top