fbpx
ಸಮಾಚಾರ

ಗಾನ ಗಾರುಡಿಗ ಎಸ್.ಪಿ ಬಾಲಸುಬ್ರಮಣ್ಯಂ ನಿಧನ

ಖ್ಯಾತ ಬಹುಭಾಷಾ ಹಿರಿಯ ಗಾಯಕ ಎಸ್.​​ಪಿ.ಬಾಲಸುಬ್ರಮಣ್ಯಂ (74) ಅವರು ವಿಧಿವಶರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಗಸ್ಟ್​ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಎಸ್.ಪಿ.ಬಾಲಸುಬ್ರಹ್ಮಣಂ ಅವರು, ಕಳೆದ ಎರಡು ತಿಂಗಳ ಹಿಂದೆ ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿ ಕೊರೋನಾ ಜಯಿಸಿದ್ದರು. ಆದರೆ ಕಳೆದ ಎರಡು ದಿನಗಳ ಹಿಂದೆ ಮತ್ತೆ ಅನಾರೊಗ್ಯಕ್ಕೀಡಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತೆ ಚೇತರಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಎಸ್​ಪಿಬಿ ಜೂನ್ 4, 1946 ರಂದು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಗ್ರಾಮದಲ್ಲಿ ಜನಿಸಿದ್ದರು. ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರಾಗಿ ಜನಪ್ರಿಯರಾಗಿದ್ದರು. ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಹಲವು ಭಾಷೆಗಳ ಜನಪ್ರಿಯ ಗಾಯಕರಾಗಿದ್ದರು. ವಿವಿಧ ಭಾಷೆಗಳಲ್ಲಿ ಒಟ್ಟು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನ ಹಾಡಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top