fbpx
ಸಮಾಚಾರ

ನಟ ಶರಣ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಶರಣ್ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೆಚ್​​​ಎಂಟಿ ಗ್ರೌಂಡ್​​ನಲ್ಲಿ ಸಿನಿಮಾದ ಶೂಟಿಂಗ್ ಮಾಡಲಾಗ್ತಿತ್ತು. ಈ ವೇಳೆ ಶರಣ್​ಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶರಣ್​ನಾ ಅಡ್ಮಿಟ್ ಮಾಡಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ನತ್ತು ನಿರ್ಮಾಪಕರು ಶರಣ್​ನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top