fbpx
ಸಮಾಚಾರ

ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ: ಬಂಧನದ ಭೀತಿಯಲ್ಲಿ ನಿರೂಪಕಿ?

ಡ್ರಗ್ಸ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ಹಾಜರಾಗುವುದಾಗಿ ಹೇಳಿ, ಗೈರಾಗಿರುವ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.

ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ನಿನ್ನೆ ಖುದ್ದಾಗಿ ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೊಲೀಸರಿಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. ಆದರೆ ವಿಚಾರಣೆಗೆ ಹಾಜರಾಗದೇ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.

ಈಗಾಗಲೇ ಮಂಗಳೂರಿನ ಸಿಸಿಬಿ ಪೊಲೀಸರು ಕಿಶೋರ್ ಶೆಟ್ಟಿ ಹಾಗೂ ತರುಣ್ ಎಂಬುವವರನ್ನು 15 ದಿನಗಳ ಹಿಂದೆಯೇ ವಶಕ್ಕೆ ಪಡೆದಿದೆ. ಇಬ್ಬರೂ ಡ್ರಗ್ಸ್ ಪೆಡ್ಲರ್​ಗಳಾಗಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ಇಬ್ಬರ ದೇಹದಲ್ಲಿಯೂ ಡ್ರಗ್​ ಸೇವಿಸಿರುವುದು ದೃಢಪಟ್ಟಿತ್ತು.

ತರುಣ್ ಅನುಶ್ರೀ ಕುಡಿತಾ ಇದ್ರು ಅಂತಾ ಮಾತ್ರ ಹೇಳಿದ್ದ. ಆದರೆ ಪೋಲಿಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ದೇವು. ಆ ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್‍ನ ಕಿಕ್ಕೇರಿಸಿಕೊಳ್ಳುತ್ತಿದ್ದರು ಎಂದು ಹೇಳಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ತರುಣ್ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗುತ್ತಿರುವ ಈ ಎಲ್ಲ ಮಾಹಿತಿಗಳು ಅನುಶ್ರೀಗೆ ಕಂಟಕವಾಗುವ ಎಲ್ಲ ಸಾಧ್ಯತೆಗಳಿವೆ. ಸದ್ಯ ಸಿಸಿಬಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗುವುದಕ್ಕೆ ಮೂರು ದಿನಗಳ ಕಾಲಾವಕಾಶವಿದೆ. ಹೀಗಾಗಿ ಅನುಶ್ರೀ ನಾಳೆಯ ಒಳಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top