ರಾಜಧಾನಿ ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರವಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾನುವಾರ ಹೇಳಿದ್ದಾರೆ. ಜೊತೆಗೆ ನಗರದಲ್ಲಿ ರಾಷ್ಟ್ರೀಯ ತನಿಖಾ ದಳದ ಶಾಶ್ವತ ವಿಭಾಗವನ್ನು ಪ್ರಾರಂಭಿಸಿ ಎಂದು ಗೃಹ ಸಚಿವ ಅಮಿತ್ ಶಾ ಅವರಿಗೆ ಬೆಂಗಳೂರು ದಕ್ಷಿಣದ ಸಂಸದ ಮನವಿ ಮಾಡಿದ್ದಾರೆ.
ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ತೇಜಸ್ವಿ ಸೂರ್ಯ ಅವರು, ಅಮಿತ್ ಶಾ ಭೇಟಿ ವೇಳೆ ಬೆಂಗಳೂರಿನ ಡಿಜೆಹಳ್ಳಿ ಹಾಗೂ ಕೆಜೆಹಳ್ಳಿಗಳಲ್ಲಿ ಇತ್ತೀಚೆಗೆ ಗಲಭೆ ನಡೆದಿರುವ ಹಾಗೂ ಈ ಹಿಂದೆ ರಾಜ್ಯದಲ್ಲಿ ಅನೇಕ ಉಗ್ರ ಸಂಘಟನೆಗಳ ದಾಳಿಯ ಹಿನ್ನಲೆಯಲ್ಲಿ ಸೂಕ್ತ ತನಿಖೆಗಾಗಿ ಎನ್ಐಎ ಕಚೇರಿ ಆರಂಭಿಸುವಂತೆ ಮನವಿ ಸಲ್ಲಿಸಲಾಯಿತು. ಈ ವೇಳೆ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.
ಅನೇಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಉಗ್ರರನ್ನು, ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ನಗರದಲ್ಲಿ ಎನ್ಐಎ ಶಾಶ್ವತ ಕಚೇರಿಯ ಅಗತ್ಯ ಇದೆ ಎಂಬುದನ್ನು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
In last few years, Bluru has become epicenter of terror activities, proven through many NIA arrests & busted sleeper cells in the city.
I urged Hon HM Sri @AmitShah Ji to set up a permanent division of NIA in Bluru
I thank him for his assurance that it will be set up soon! pic.twitter.com/ASxMuumtPr
— Tejasvi Surya (@Tejasvi_Surya) September 27, 2020
ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್ಗಳನ್ನು ಎನ್ಐಎ ವಿಫಲಗೊಳಿಸಿದೆ. ಹೀಗಾಗಿ ಎನ್ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರನ್ನು ಆಗ್ರಹಿಸಿದ್ದೆ. ಮನವಿಯನ್ನೂ ಮಾಡಿದ್ದೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
