fbpx
ಸಮಾಚಾರ

SPB ಚಿಕಿತ್ಸಾ ವೆಚ್ಚದ ಬಗ್ಗೆ ಕಿಡಿಗೇಡಿಗಳಿಂದ ವದಂತಿ: ನೋವಿನಲ್ಲಿ ಗೊಂದಲಕ್ಕೆ ತೆರೆ ಎಳೆದ SPB ಪುತ್ರ ಚರಣ್

ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಆಸ್ಪತ್ರೆ ಖರ್ಚು ವೆಚ್ಚದ ಬಗ್ಗೆಯೂ ಸೋಶಿಯಲ್ ಮೀಡಿಯಾದಲ್ಲಿ ಜೋರಾದ ಚರ್ಚೆ ಯಾಗಿತ್ತು.

51 ದಿನಗಳ ಕಾಲ ಪಡೆದಿದ್ದ ಚಿಕಿತ್ಸೆಗೆ 3 ಕೋಟಿಗೂ ಹೆಚ್ಚು ಚಿಕಿತ್ಸಾ ವೆಚ್ಚ ಭರಿಸಬೇಕಿತ್ತು. ಇದರಲ್ಲಿ 1.85 ಕೋಟಿಯಷ್ಟು ಹಣವನ್ನು ಮಾತ್ರ ಎಸ್ ಪಿ ಚರಣ್ ಎಂಜಿಎಂ ಆಸ್ಪತ್ರೆಗೆ ಪಾವತಿ ಮಾಡಿದ್ದಾರೆ. ಉಳಿದ ಹಣಕ್ಕಾಗಿ ಸಹಾಯ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಕುಟುಂಬ ಮನವಿ ಮಾಡಿತ್ತು. ತಮಿಳುನಾಡು ಸರ್ಕಾರ ಪ್ರತಿಕ್ರಿಯೆ ನೀಡಲಿಲ್ಲ ಆದರೆ ಅಂತಿಮವಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹಾಯ ಹಸ್ತ ಚಾಚಿದರು ಎಂಬ ವದಂತಿಗಳನ್ನು ಹಬ್ಬಿಸಲಾಗಿದೆ.

ವದಂತಿಗಳ ನಂತರ ಎಂಜಿಎಂ ಆಸ್ಪತ್ರೆಯ ವೈದ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಚರಣ್ ಅವರು, ನನ್ನ ತಂದೆಯ ಮರಣದ ನಂತರ, ಇನ್ನು ಎಷ್ಟು ಹಣ ಪಾವತಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಯನ್ನು ಕೇಳಿದ್ದೆ. ಆದರೆ ಆಸ್ಪತ್ರೆಯ ಅಧಿಕಾರಿಗಳು ಯಾವುದೇ ಬಾಕಿ ಬಿಲ್ ಸ್ವೀಕರಿಸುವುದಿಲ್ಲ ಎಂದು ಹೇಳಿದರು.

“ತಂದೆಯ ಆಸ್ಪತ್ರೆ ವೆಚ್ಚಗಳು, ಎಂಜಿಎಂ ಆಸ್ಪತ್ರೆ ಹಾಗೂ ಸಾಹಾಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ, ಈ ರೀತಿಯ ವದಂತಿಗಳಿಂದಾಗಿ ಬಹಳಷ್ಟು ಜನರಿಗೆ ನೋವುಂಟಾಗಲಿದೆ. ಆಸ್ಪತ್ರೆಯ ಸಿಬ್ಬಂದಿಗಳು ನಮಗೆ ಅತ್ಯುತ್ತಮವಾಗಿ ಸಹಕರಿಸಿದ್ದಾರೆ. ಆಸ್ಪತ್ರೆಯ ಚಿಕಿತ್ಸಾ ವೆಚ್ಚಗಳ ಬಗ್ಗೆ ವೈದ್ಯರು ಹಾಗೂ ನಾನು ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ನೀಡುತ್ತೇವೆ ಎಂದು ಚರಣ್ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top