fbpx
ಸಮಾಚಾರ

20 ರೂ. ಮಾಸ್ಕ್‌ಗಾಗಿ 1 ಸಾವಿರ ದುಡ್ಡು ಕಳ್ಕೊಬೇಕಾದಿತು ಎಚ್ಚರ

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ ರೂ. 1 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ. 500ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಹಿರಿಯ ಅಧಿಕಾರಿಗಳ ಶಿಫಾರಸಿನ‌ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಗುರುವಾರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಡಾ.ಕೆ.ಸುಧಾಕರ್ ಅವರು ತಿಳಿಸಿದರು.

 

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಾಸ್ಕ್‌ ಹಾಕಿಕೊಳ್ಳದವರಿಗೆ ಸದ್ಯ 200 ರೂ. ದಂಡ ಹಾಕಲಾಗುತ್ತಿದೆ. ಆದಾಗ್ಯೂ, ಸಾರ್ವಜನಿಕರು ನಿಯಮ ಉಲ್ಲಂಘಿಸುತ್ತಿರುವುದು ಮುಂದುವರಿದಿದೆ. ಹೀಗಾಗಿ, ದಂಡದ ಮೊತ್ತವನ್ನು 1000 ರೂ. ಗಳಿಗೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ.

ದಂಡ ಎಷ್ಟು?
ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದಿದ್ರೆ 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ಹಾಕಲಾಗುತ್ತದೆ. ಅಂಗಡಿ, ಮಾಲ್, ಮಾರ್ಕೇಟ್, ಬಸ್ ನಿಲ್ದಾಣಗಳಲ್ಲೂ ಮಾಸ್ಕ್ ಹಾಕದವರಿಗೆ ದಂಡ ವಿಧಿಸಲಾಗುತ್ತದೆ.

ಸರ್ಕಾರಿ ಕಚೇರಿಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಇದ್ದರೆ ಮಾತ್ರ ಸರ್ಕಾರಿ ಕಚೇರಿ ಪ್ರವೇಶಿಲು ಅನುಮತಿ ನೀಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಸಾಮಾಜಿಕ ಅಂತರ ಪಾಲನೆಗೆ ಒತ್ತು ನೀಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top