ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ ಎಂದು ಕಿಡಿಕಾರಿದ್ದಾರೆ. ಜೊತೆಗೆ ಕಾಂಗ್ರೆಸ್ ಮುಂದೆ ಮೈತ್ರಿ ಪ್ರಸ್ತಾಪವನ್ನು ಜೆಡಿಎಸ್‌ನಿಂದ ಯಾರಿಟ್ಟಿದ್ದಾರೆ ಎಂದು ಕೈ ನಾಯಕರಿಗೆ ಎಚ್‌ಡಿಕೆ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ” ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ. ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ.
1/3— H D Kumaraswamy (@hd_kumaraswamy) October 1, 2020
“ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ.” ಎಂದು ಟಾಂಗ್ ನೀಡಿದ್ದಾರೆ,.
ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ,ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ,ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ.
2/3— H D Kumaraswamy (@hd_kumaraswamy) October 1, 2020
“ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ.” ಎಂದು ಹೇಳಿದ್ದಾರೆ.
ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ 'ನಾಯಕ'ರು ಲಾಭ ಮಾಡಿಕೊಳ್ಳುವುದೂ ಬೇಡ.
3/3— H D Kumaraswamy (@hd_kumaraswamy) October 1, 2020
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
