fbpx
ಸಮಾಚಾರ

ಅಪ್ಪ ಆಗ್ತಿದ್ದಾರೆ ನಿರ್ದೇಶಕ ಪವನ್ ಒಡೆಯರ್: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಟಾರ್ ದಂಪತಿ

‘ಗೂಗ್ಲಿ’, ‘ನಟಸಾರ್ವಭೌಮ’ ಸಿನಿಮಾ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ಶೀಘ್ರದಲ್ಲಿಯೇ ತಂದೆ-ತಾಯಿಗಳಾಗುತ್ತಿದ್ದಾರೆ. ಈ ಸಂಭ್ರಮದ ಸುದ್ದಿಯನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಅಪೇಕ್ಷಾ ಪುರೋಹಿತ್ ಗರ್ಭಿಣಿ ಫೋಟೋಶೂಟ್ ಮಾಡಿಸಿದ್ದಾರೆ. ಪತ್ನಿಯ ಜೊತೆ ಪವನ್ ಒಡೆಯರ್ ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ವಿವಿಧ ರೀತಿಯಲ್ಲಿ ದಂಪತಿ ಫೋಟೋಶೂಟ್ ಮಾಡಿದ್ದು, ಇಬ್ಬರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

 

 

ಈ ಫೋಟೋವನ್ನು ಪವನ್ ಅವರು ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿದ್ದು, “ಸದಾ ವಟ ವಟ ಮಾತನಾಡುವ ನಾನು. ಮೌನಿಯಾದ ಕ್ಷಣಗಳು. ಹೌದು ನಮ್ಮ ಜೀವನದ ಅತ್ಯಂತ ಸುಂದರ ದಿನಗಳಿಗಾಗಿ ಹಾತೊರೆಯುತ್ತಿದ್ದೇವೆ. ಮಾತುಗಳಲ್ಲಿ ಆ ಖುಷಿ ಹೇಳಲಾಗದೆ. ಹಾಡಿನ ರೂಪದಲ್ಲಿ ವ್ಯಕ್ತಪಡಿಸುವ ಪ್ರಯತ್ನ ಮಾಡಿದ್ದೇವೆ. ಆ ಮುಗುಳುನಗೆ ಹಾಡಿಗಾಗಿ ನಿರೀಕ್ಷಿಸಿ” ಎಂದು ಬರೆದುಕೊಂಡಿದ್ದಾರೆ.

ಇವರಿಬ್ಬರಿಗೂ ಮದುವೆಗೆ ಮುನ್ನ ಒಂದು ವರ್ಷಗಳ ಕಾಲದ ಪರಿಚಯವಿತ್ತು. ಪರಸ್ಪರ ಕುಟುಂಬದ ಸಮ್ಮುಖದಲ್ಲಿಯೇ 2018ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಾಗಲಕೋಟೆಯಲ್ಲಿ ಈ ಜೋಡಿಯ ನಿಶ್ಚಿತಾರ್ಥ, ಮದುವೆ ಅದ್ದೂರಿಯಾಗಿ, ಶಾಸ್ತ್ರೋಕ್ತವಾಗಿ ನಡೆದಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top