fbpx
ಸಮಾಚಾರ

ಖ್ಯಾತ ನಟಿ ತಮನ್ನಾ ಆಸ್ಪತ್ರೆಗೆ ದಾಖಲು

ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೆ ಕೊರೊನಾ ಪಾಸಿಟಿವ್ ಅಗಿದೆ. ಕಳೆದ ಕೆಲ ದಿನಗಳ ಹಿಂದೆ ತಮನ್ನಾ ಪೋಷಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇದೀಗ ತಮನ್ನಾಗೂ ಪಾಸಿಟಿವ್ ಆಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ!

ಹೈದರಾಬಾದ್ ನಲ್ಲಿ ನಡೆಯುತ್ತಿರುವ ಚಿತ್ರೀಕರಣ ವೇಳೆ ತಮನ್ನಾರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾದಾಗ ವರದಿಯಲ್ಲಿ ಸೋಂಕು ತಗುಲಿರೋದು ಖಚಿತವಾಗಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೂ ಮೊದಲು ತಮನ್ನಾ ಪೋಷಕರಿಗೂ ಕೊರೊನಾ ಸೋಂಕು ತಗುಲಿದೆ.

ತಮನ್ನಾ ಸದ್ಯ ವೆಬ್‌ ಸಿರೀಸ್‌ವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊರೊನಾ ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ, ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ತಮ್ಮ ಅಚ್ಚು ಮೆಚ್ಚಿನ ನಟಿ ತಮನ್ನಾ ಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಷಯ ತಿಳಿದುಕೊಂಡ ಆಕೆಯ ಅಭಿಮಾನಿಗಳು ಅಘಾತಕ್ಕೀಡಾಗಿದ್ದು, ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top