fbpx
ಸಮಾಚಾರ

ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಭಾರಿ ಆಘಾತ; ಸಂಪೂರ್ಣ ಐಪಿಎಲ್ ನಿಂದ ಸ್ಟಾರ್ ಆಟಗಾರ ಔಟ್

13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡಗಳಲ್ಲಿ ಒಂದಾಗಿರುವ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಪಿನ್ನರ್ ಅಮಿತ್ ಮಿಶ್ರಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ.

 

 

ಕೋಲ್ಕತ ನೈಟ್‌ ರೈಡರ್ಸ್ ವಿರುದ್ಧ ಶಾರ್ಜಾದಲ್ಲಿ ನಡೆದ ಪಂದ್ಯದ ವೇಳೆ ಲೆಗ್‌ ಸ್ಪಿನ್ನರ್ ಅಮಿತ್ ಮಿಶ್ರಾ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದರು. ಅಂದು ಅಮಿತ್ ಮಿಶ್ರಾ ತಾವೆಸೆದ ಮೊದಲ ಓವರ್‌ನಲ್ಲೇ ನಿತಿಶ್ ರಾಣಾ ಬಲವಾಗಿ ಬಾರಿಸಿದ ಕ್ಯಾಚನ್ನು ಹಿಡಿಯುವ ಯತ್ನದಲ್ಲಿ ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದರು.

ಗಾಯದ ಸಮಸ್ಯೆ ಗಂಭೀರವಾಗಿದ್ದು ಅವರು ಟೂರ್ನಿಯಿಂದಲೇ ನಿರ್ಗಮಿಸುವಂತೆ ಮಾಡಿದೆ. ಈ ವಿಚಾರವನ್ನು ಫ್ರಾಂಚೈಸಿಯು ಸೋಮವಾರ ಅಧಿಕೃತವಾಗಿ ಘೋಷಿಸಿದೆ. ಅವರು ತಂಡದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದರು ಎಂದು ತಂಡ ವ್ಯವಸ್ಥಾಪಕರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ತಜ್ಞರ ಸಲಹೆ ಪಡೆದು ಗಾಯಕ್ಕೆ ಚಿಕಿತ್ಸೆ ಪಡೆಯಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top