fbpx
ಸಮಾಚಾರ

ಕುಸುಮಾ ಬಗ್ಗೆ ಪ್ರಶಾಂತ್ ಸಂಬರಗಿ ಕೀಳುಮಟ್ಟದ ಹೇಳಿಕೆ: ಮುಖಕ್ಕೆ ಹೊಡೆದಹಾಗೆ ತಿರುಗೇಟು ನೀಡಿದ ಡಿಕೆ ರವಿ ಪತ್ನಿ

ತಮ್ಮ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮಾಡಿದ್ದ ಪೋಸ್ಟ್ ಗೆ ಡಿಕೆ ರವಿ ಅವರ ಪತ್ನಿ ಕುಸುಮಾ ಹನಮಂತರಾಯಪ್ಪ ತಿರುಗೇಟು ನೀಡಿದ್ದು, ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂದು ಹೇಳಿದ್ದಾರೆ.

 

 

ದಿವಂಗತ ಡಿ ಕೆ ರವಿ ಪತ್ನಿ ಕುಸುಮಾ ರವಿವಾರ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಚಿತ್ರವನ್ನು ಪೋಸ್ಟ್ ಮಾಡಿರುವ ಸಂಬರಗಿ” ಕುಸುಮಾರ ದುರಾದೃಷ್ಟ ಡಿ ಕೆ ರವಿಯಿಂದ ಡಿ ಕೆ ಶಿವಕುಮಾರ್ ಗೆ ವರ್ಗಾವಣೆಯಾಗಿದೆ “ ಎಂದಿದ್ದರು.

 

ಸಹೋದರ ಪ್ರಶಾಂತ್ ಸಂಬರಗಿಯವರಿಗೆ,

ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ…

Kusuma Hanumantharayappa ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಸೋಮವಾರ, ಅಕ್ಟೋಬರ್ 5, 2020

 

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಕುಸುಮಾ ಶಾಂತ್ ಸಂಬರಗಿಗೆ ಫೇಸ್ ಬುಕ್ ಮೂಲಕವೇ ಕುಸುಮಾ ತಿರುಗೇಟು ನೀಡಿದ್ದಾರೆ.

ಸಹೋದರ ಪ್ರಶಾಂತ್ ಸಂಬರಗಿ ಅವರಿಗೆ,
ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ದ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ದವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು.

ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ (Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ.

ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?

ಹೆಣ್ಣು‌ ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ luck ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್ ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ?

ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ.
ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಬರೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top