fbpx
ಸಮಾಚಾರ

“ಭಕ್ತ ಪ್ರಹ್ಲಾದ” ನಿರ್ದೇಶಕ ವಿಜಯ್‌ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿದ ಪುನೀತ್‌ ರಾಜ್‌ಕುಮಾರ್‌

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ನಿಧನರಾಗಿದ್ದಾರೆ. ಸ್ಟಾರ್ ಡೈರೆಕ್ಟರ್ ಎನಿಸಿಕೊಂಡಿದ್ದ ವಿಜಯ ರೆಡ್ಡಿ, ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹುಅಂಗಾಗ ವೈಫಲ್ಯದಿಂದ ವಿಜಯ ರೆಡ್ಡಿ ಇಹಲೋಕ ತ್ಯಜಿಸಿದ್ದು ಅವರಿಗೆ 84 ವರ್ಷ ವಯಸ್ಸಾಗಿತ್ತು.

ಹಿರಿಯ ನಿರ್ದೇಶಕನ ಅಗಲಿಕೆಗೆ ನಟ ಪುನೀತ್​ ರಾಜ್​ಕುಮಮಾರ್ ಸಹ ಕಂಬನಿ ಮಿಡಿದಿದ್ದಾರೆ. ಅಲ್ಲದೆ ಅವರೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ತನ್ನ ಭಾಗ್ಯ ಎಂದು ಹಳೇ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

 

 

ತಂದೆಯವರ ಮರೆಯಲಾಗದ ಸಿನಿಮಾಗಳಾದ ಗಂಧದಗುಡಿ, ಮಯೂರ, ನಾ ನಿನ್ನ ಮರೆಯಲಾರೆ ಹಾಗೂ ಹಲಾವಾರು ಸಿನೆಮಾಗಳನ್ನು ನಿರ್ದೇಶಿಸಿರುವ ವಿಜಯ್ ರೆಡ್ಡಿ, ಅವರು ನಿಧನರಾಗಿದ್ದಾರೆ. ಅವರ ನಿರ್ದೇಶನದ ಭಕ್ತ ಪ್ರಹ್ಲಾದ ಚಿತ್ರದಲ್ಲಿ ನಾನು ನಟಿಸಿರುವುದೇ ನನ್ನ ಭಾಗ್ಯ. ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಅಪ್ಪು ಟ್ವೀಟ್​ ಮಾಡುವುದರೊಂದಿಗೆ ತಮ್ಮ ತಂದೆ ಜತೆಗಿರುವ ಅವರ ಫೋಟೋವನ್ನೂ ಹಂಚಿಕೊಂಡಿದ್ದಾರೆ.

1970ರಲ್ಲಿ ತೆರೆಕಂಡ ರಂಗಮಹಲ್ ರಹಸ್ಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನಂತರ ಡಾ. ರಾಜಕುಮಾರ್ ಅಭಿನಯದ ಗಂಧದ ಗುಡಿ, ಮಯೂರ, ಶ್ರೀನಿವಾಸ ಕಲ್ಯಾಣ, ಸನಾದಿ ಅಪ್ಪಣ್ಣ, ಹುಲಿಯ ಹಾಲಿನ ಮೇವು ಚಿತ್ರಗಳು ಸೇರಿದಂತೆ ಕನ್ನಡದಲ್ಲಿ ಸುಮಾರು 48 ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top