fbpx
ಸಮಾಚಾರ

ಮಗಳಿಗೆ ಸೈನ್ಯ ಎಂದು ಹೆಸರಿಟ್ಟ ದೇಶದ ಹೆಮ್ಮೆಯ ಯೋಧ

ಉಡುಪಿ ಜಿಲ್ಲೆಯಲ್ಲಿ ಕನ್ನಡ ಅಭಿಮಾನಿಯೊಬ್ಬರು ತಮ್ಮ ಹೆಣ್ಣು ಮಗುವಿಗೆ ಕನ್ನಡ ಅಂತ ನಾಮಕರಣ ಮಾಡಿದ್ದು, ಸುದ್ದಿಯಾಗಿತ್ತು. ಈಗ ಅದೇ ರೀತಿಯಲ್ಲಿ ಸೈನಿಕರೊಬ್ಬರು ತಮ್ಮ ಮಗಳಿಗೆ ಸೈನ್ಯ ಎಂದು ಹೆಸರಿಟ್ಟು ದೇಶಪ್ರೇಮ ಮೆರೆದಿದ್ದಾರೆ. ಸೈನ್ಯದ ಮೇಲಿರುವ ವಿಶೇಷ ಪ್ರೀತಿಯನ್ನು, ಕಾಳಜಿಯನ್ನು ತೋರಿದ್ದಾರೆ.

ಜಿಲ್ಲೆಯ ಹೆಬ್ರಿ ತಾಲೂಕಿನ ಆಶಾ- ಪ್ರಶಾಂತ್ ಪೂಜಾರಿ ಅವರು ತಮ್ಮ ಮಗುವಿಗೆ ಸೈನ್ಯ ಅಂತ ಹೆಸರಿಡುವ ಮೂಲಕ ಗಮನ ಸೆಳೆದಿದ್ದಾರೆ. ಹಲವು ವರ್ಷಗಳಿಂದ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಮಗುವಿನ ತಂದೆ ಪ್ರಶಾಂತ್ ಅವರು ಪ್ರಸ್ತುತ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ದೇಶ ಹಾಗೂ ಸೈನ್ಯದ ಮೇಲಿನ ವಿಶೇಷ ಅಭಿಮಾನ ಇರುವ ಪ್ರಶಾಂತ್ ಮಗುವಿಗೆ ಸೈನ್ಯ ಹೆಸರಿಡುವ ಮೂಲಕ ವೃತ್ತಿಗೆ ಗೌರವ ತೋರಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಮಗುವಿಗೆ ಏನೆಂದು ಹೆಸರಿಡಬೇಕು ಅಂತ ಮಾತುಕತೆಯಾದಾಗ, ಸೈನ್ಯ ಎಂದು ಯಾಕೆ ಹೆಸರಿಡಬಾರದು ಎಂಬ ಆಲೋಚನೆ ಬಂತು. ಪತ್ನಿ ಮತ್ತು ಕುಟುಂಬದವರ ಜೊತೆ ಈ ವಿಚಾರದಲ್ಲಿ ಚರ್ಚೆಗಳು ನಡೆಯಿತು. ಅಂತಿಮವಾಗಿ ಕುಟುಂಬದ ಸದಸ್ಯರಿಂದ ಒಪ್ಪಿಗೆ ಕೂಡ ಸಿಕ್ಕಿತು” ಎಂದು ಪ್ರಶಾಂತ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top