fbpx
ಸಮಾಚಾರ

ವಿವಾದಾತ್ಮಕ ನಟಿ ಕಂಗನಾ ವಿರುದ್ಧ FIR ದಾಖಲಿಸುವಂತೆ ತುಮಕೂರು ಜೆಎಂಎಫ್​​​ಸಿ ಕೋರ್ಟ್ ಸೂಚನೆ

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ ರೈತರನ್ನು ಗುರಿಯಾಗಿಸಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕರ್ನಾಟಕದ ತುಮಕೂರು ಸ್ಥಳೀಯ ನ್ಯಾಯಾಲಯವೊಂದು ಶುಕ್ರವಾರ ಪೊಲೀಸರಿಗೆ ನಿರ್ದೇಶನ ನೀಡಿದೆ.

ನಟಿ ಕಂಗನಾ ರಾಣಾವತ್‌ ರೈತರನ್ನು ನಿಂದಿಸಿದ್ದಾರೆಂದು ಆರೋಪಿಸಿ ಹೈಕೋರ್ಟ್‌ ವಕೀಲರಾಗಿರುವ ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿಯ ಕದರನಹಳ್ಳಿ ತಾಂಡ್ಯಾದ ಕ್ಯಾತ್ಸಂದ್ರ ಪೊಲೀಸ್‌ ಠಾಣೆ ವ್ಯಾಪ್ತಿಯ ನಿವಾಸಿ ಎಲ್‌. ರಮೇಶ್‌ ನಾಯಕ್‌ ಅವರು ಸೆ.25ರಂದು ಕಂಗಾನಾ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.

ಸೆಪ್ಟೆಂಬರ್ 21, 2020 ರಂದು ಕಂಗನಾ ರಣಾವತ್ ತನ್ನ ಟ್ವಿಟ್ಟರ್ ಖಾತೆ “ಕಂಗನಾಟೀಮ್’ ನಿಂದ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 156 (3) ರ ಅಡಿಯಲ್ಲಿ ವಕೀಲ ರಮೇಶ್ ನಾಯಕ್.ಎಲ್ ಅವರು ದೂರು ದಾಖಲಿಸಿದ್ದಾರೆ.

ಸ್ವತಃ ರೈತರಾಗಿರುವ ವಕೀಲ ರಮೇಶ್ ನಾಯಕ್ ಕಂಗನಾ ಹೇಳಿಕೆಯಿಂದ ಅಸಮಾಧಾನಗೊಂಡು, ನೇರವಾಗಿ ಕೋರ್ಟ್​​ನಲ್ಲಿ ದೂರು ದಾಖಲಿಸಿದ್ದರು. ಜೊತೆಗೆ ಡಿಜಿಪಿ ಮತ್ತು ಜಿಲ್ಲಾ ಪೊಲೀಸರಿಗೆ ಇ ಮೇಲ್​ ಮೂಲಕ ಈ ಹಿಂದೆ ದೂರು ನೀಡಿದ್ದರು. ಪೊಲೀಸರು ದೂರು ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ನೇರವಾಗಿ ತುಮಕೂರು ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಾಗಿತ್ತು. ಈ ಹಿನ್ನೆಲೆ ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಾಯ ಪೊಲೀಸರಿಗೆ ಸೂಚಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top