fbpx
ಸಮಾಚಾರ

“ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು?” ಶೋಭಾ ಕರಂದ್ಲಾಜೆಗೆ ಕುಸುಮಾ ರವಿ ತಿರುಗೇಟು

ಸಂಸದೆ ಶೋಭಾ ಕರಂದ್ಲಾಜೆ ಕುಸುಮಾ ಪತಿ, ಐಎಎಸ್ ಅಧಿಕಾರಿಯಾಗಿದ್ದ ದಿ. ಡಿ. ಕೆ. ರವಿ ಹೆಸರನ್ನು ಪ್ರಸ್ತಾಪಿಸಿದ್ದರು. “ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ” ಎಂದು ಹೇಳಿಕೆ ನೀಡಿದ್ದರು. ಇದೀಗ ಶೋಭಾ ಕರಂದ್ಲಾಜೆ ಹೇಳಿಕೆಗೆ ಕುಸುಮಾ ರವಿ ತಿರುಗೇಟು ನೀಡಿದ್ದಾರೆ.

 

 

ಇತ್ತೀಚೆಗೆ ಶೋಭಾ ಕರಂದ್ಲಾಜೆ, ಡಿಕೆ ರವಿಯ ಹೆಸರನ್ನು ಯಾರೇ ಬಳಸಿದರೂ ಅವರಿಗೆ ಒಳ್ಳೆಯದಾಗಲ್ಲ ಎಂದು ಹೇಳಿಕೆ ನೀಡಿದ್ದರು.ಈ ಮಾತು ಪರವಿರೋಧಕ್ಕೆ ಕಾರಣವಾಗಿತ್ತು. ಫೇಸ್ ಬುಕ್ ಪೋಸ್ಟ್ ಮೂಲಕ ಕುಸುಮಾ ಅವರು ಶೋಭಾ ಕರಂದ್ಲಾಜೆ ಹೇಳಿಕೆಗೆ ಕುಸುಮಾ ಪ್ರತಿಕ್ರಿಯೆ ನೀಡಿದ್ದಾರೆ.

“ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಎನ್ನುವುದನ್ನು ಇಡೀ ದೇಶವೇ ನೋಡಿದೆ. ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ “ನೊಂದವರ ನೋವ ನೋಯದವರೆತ್ತ ಬಲ್ಲರೊ?” ಎಂಬ ವಚನ ನೆನಪಿಗೆ ಬರುತಿದೆ. ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ! ಇದು ನಿಮಗೆ ನೀವೇ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು.” ಎಂದು ಕುಸುಮಾ ನಯವಾಗಿಯೇ ಶೋಭಾಗೆ ತಿರುಗೇಟು ಕೊಟ್ಟಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top