fbpx
ಸಮಾಚಾರ

400ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದ ಕನ್ನಡದ ಹಿರಿಯ ಸಂಗೀತ ನಿರ್ದೇಶಕ ರಾಜನ್ ವಿಧಿವಶ

ಭಾರತೀಯ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರು ಭಾನುವಾರ (ಅ.11) ರಾತ್ರಿ 10.30ಕ್ಕೆ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ, ಅವರು ಮನೆಯಲ್ಲಿಯೇ ಹೃದಯಾಘಾತದಿಂದ ನಿಧನರಾದರು. ಪುತ್ರ ಮತ್ತು ಪುತ್ರಿಯನ್ನು ಅವರು ಅಗಲಿದ್ದಾರೆ.

ನಿನ್ನೆ ಆರ್ ಟಿ ನಗರದ ತಮ್ಮ‌ ಮನೆಯಲ್ಲಿ ಕುಳಿತಿದ್ದಾಗ ಹೃದಯಾಘಾತ ಸಂಭವಿಸಿದೆ. ಈ ವೇಳೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊರೋನಾ ವೈರಸ್ ಇರುವ ಹಿನ್ನೆಲೆಯಲ್ಲಿ ಆಪ್ತರಿಗಷ್ಟೇ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸೋಮವಾರ ಹೆಬ್ಬಾಳದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಗ ಅನಂತ್ ನಾಗೇಂದ್ರ ಮಾಹಿತಿ ನೀಡಿದ್ದಾರೆ.

ಮೂಲತಃ ಮೈಸೂರಿನವರಾದ ರಾಜನ್, ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ಸೇರಿಕೊಂಡು ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಸಂಗೀತ ನಿರ್ದೇಶನ ಮಾಡುತ್ತಿದ್ದರು. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952ರಿಂದ 1999ರವರೆಗೆ 400ಕ್ಕೂ ಅಧಿಕ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. 200ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿ 400ಕ್ಕೂ ಅಧಿಕ ಸಿನಿಮಾಗಳಿಗೆ ರಾಜನ್​ ಹಾಗೂ ನಾಗೇಂದ್ರ ಜೊತೆಯಾಗಿ ಸಂಗೀತ ನೀಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top