fbpx
ಸಮಾಚಾರ

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್‌ ದಾಖಲು

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪರ ಪುತ್ರಿ ಕುಸುಮಾ ಅಖಾಡಕ್ಕಿಳಿದಿದ್ದಾರೆ. ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪರ ಪುತ್ರಿ ಕುಸುಮಾ ಅಖಾಡಕ್ಕಿಳಿದಿದ್ದಾರೆ.

ಆರೋಪವೇನು?
ನಾಮಪತ್ರ ಸಲ್ಲಿಸುವ ಕಚೇರಿಯ 100 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದ್ರೆ, ಸಿದ್ದರಾಮಯ್ಯನವರ ಚಾಲಕರು ಬ್ಯಾರಿಕೇಡ್ ತೆಗೆದು ನೂರು ಮೀಟ್ ವ್ಯಾಪ್ತಿಯೊಳಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಾಗಿದೆ.

ಐಪಿಸಿ ಸೆಕ್ಷನ್ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ) ಹಾಗೂ 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿಯಲ್ಲಿ ದೂರು ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top