fbpx
ಸಮಾಚಾರ

“ಸಿನಿಮಾ ನಂಬಿ ನಿಮ್ಮ ಜೀವನ ಹಾಳುಮಾಡಿಕೊಳ್ಳಬೇಡಿ” ಜಗ್ಗೇಶ್ ಕಿವಿಮಾತು

ಕನ್ನಡದ ಮಟ್ಟಿಗೆ ಟ್ವಿಟರ್’ನಲ್ಲಿ ಅತಿಹೆಚ್ಚು ಸಕ್ರಿಯವಾಗಿರೋ ನಟ ಎಂಬ ಕೀರ್ತಿ ನಿಸ್ಸಂದೇಹವಾಗಿ ಜಗ್ಗೇಶ್ ಅವರಿಗೆ ಸಲ್ಲುತ್ತದೆ. ಆಗಾಗ ಜಗ್ಗೇಶ್ ಮನದ ಮಾತುಗಳನ್ನು ಟ್ವಿಟರ್ ನಲ್ಲೆ ದಾಖಲಿಸುತ್ತಿರುತ್ತಾರೆ..ವಯಕ್ತಿಕ, ಸಿನಿಮಾ ವಿಚಾರಗಳ ಜೊತೆಗೆ ಸಮಾಜದಲ್ಲಿ ನಡೆಯುವ ಆಗುಹೋಗುಗಳ ಬಗ್ಗೆ ತಮ್ಮ ಟ್ವಿಟರ್ ಅಕೌಂಟ್ ಮೂಲಕವೇ ಪ್ರತಿಕ್ರಿಯಿಸುತ್ತಾ ಸದಾ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರುವವರು ನವರಸ ನಾಯಕ ಜಗ್ಗೇಶ್.. ಇದೀಗ ಜಗ್ಗೇಶ್ ತಮ್ಮ ಟ್ವಿಟರ್ ನಲ್ಲಿ ಸಿನಿಮಾ ನಂಬಿ ನಿಮ್ಮ ಜೀವನ ಹಾಳುಮಾಡಿಕೊಳ್ಳಬೇಡಿ ಎಂದು ಯುವಕರಿಗೆ ಕಿವಿಮಾತು ಹೇಳಿದ್ದಾರೆ.

ಸರ್, ನನಗೆ ಡೈರೆಕ್ಟರ್ ಆಗಬೇಕು ಅನ್ನೋದು ನನ್ನ ಕನಸು. 2ನೇ ವರ್ಷದ ಡಿಪ್ಲೋಮಾ ಮಾಡುತ್ತಿದ್ದೀನಿ. ಮುಂದೆ ನಾನು ಇಂಜಿನಿಯರಿಂಗ್‌ಗೆ ಹೋಗಲೇ ಅಥವಾ ಚಿತ್ರರಂಗಕ್ಕೆ ಕಾಲಿಡಲೇ? ನನಗೆ ನಿರ್ದೇಶಕ ಆಗಬೇಕೆಂಬ ದೊಡ್ಡ ಕನಸಿದೆ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಜಗ್ಗೇಶ್ ನೀಡಿರುವ ಉತ್ತರ ಎಲ್ಲೆಡೆ ವೈರಲ್ ಆಗಿದೆ.

 

 

ದಯಮಾಡಿ ಓದಿ ದಡ ಸೇರಿ. ಇಂದಿನ ಸಿನಿಮಾ ನಂಬಿ ತಂದೆ-ತಾಯಿ ಕನಸು ಮತ್ತು ನಿಮ್ಮ ಜೀವನ ಹಾಳು ಮಾಡಿಕೊಳ್ಳದಿರಿ. ನೀವೆಲ್ಲಾ ಅಂದುಕೊಂಡಷ್ಟು ಸುಲಭವಿಲ್ಲಾ ಇಂದಿನ ಸಿನಿಮಾ. ಬೇಕಾದರೆ ಸಂತೋಷಕ್ಕೆ ಹವ್ಯಾಸವಾಗಿ ಬಳಸಿ ವೃತ್ತಿಯಾಗಿ ಅಲ್ಲ. ಬೆರಳೆಣಿಸುವ ಕೆಲವರ ಬಿಟ್ಟು ಶೇ.98ರಷ್ಟು ಸಿನಿಮಾ ಜನ ಸಂಕಷ್ಟದಲ್ಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಅಂದಹಾಗೆ ಕೊರೊನಾ ವೈರಸ್ ಮತ್ತು ಲಾಕ್‍ಡೌನ್ ನಿಂದಾಗಿ ಚಿತ್ರರಂಗ ಸಂಕಷ್ಟದಲ್ಲಿದೆ. ಸುಮಾರು ಎರಡರಿಂದ ಮೂರು ತಿಂಗಳು ಬಣ್ಣದ ಲೋಕ ಸ್ತಬ್ಧವಾಗಿತ್ತು. ಈ ಹಿನ್ನೆಲೆ ಸಿನಿಮಾ ನಿರ್ಮಾಪಕರು, ಚಿತ್ರಮಂದಿರ ಮಾಲೀಕರು, ನಟರು ಸೇರಿದಂತೆ ಬಹುತೇಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top