fbpx
ಸಮಾಚಾರ

ಸ್ಯಾಂಡಲ್‍ವುಡ್ ಡ್ರ*ಗ್ ಕೇಸ್‌ಗೆ ರೋಚಕ ಟ್ವಿಸ್ಟ್: ವಿವೇಕ್ ಒಬೆರಾಯ್ ಮನೆಗೆ ಸಿಸಿಬಿ ದಾಳಿ

ಸ್ಯಾಂಡಲ್‍ವುಡ್ ಡ್ರ*ಗ್ ಕೇಸ್‌ಗೆ ರೋಚಕ ಟ್ವಿಸ್ಟ್ ಸಿಕ್ಕಿದ್ದು ಬಹುಭಾಷಾ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸ್ ದಾಳಿ ನಡೆಸಿದ್ದಾರೆ.

ಡ್ರಗ್ ಮಾಫಿಯಾ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನನ್ನು ವಿಚಾರಣೆಗೆ ಒಳಪಡಿಸಲು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿದ್ದು ಅವರ ಮನೆಯಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಇಂದು ಒಬೆರಾಯ್ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.

ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಆದಿತ್ಯ ಆಳ್ವಾ ಪ್ರಮುಖ ಆರೋಪಿಯಾಗಿದ್ದಾರೆ. ಈಗಾಗಲೇ ಬಂತರಾಗಿರುವ ಬಹಳಷ್ಟು ಮಂದಿ ಆರೋಪಿಗಳು ಆದಿತ್ಯ ಆಳ್ವಾ ಅವರ ಹೆಸರನ್ನು ಹೇಳಿದ್ದು, ಮಾದಕ ನಶೆಗೆ ಸಂಬಂಧಪಟ್ಟಂತೆ ಬಹಳಷ್ಟು ಪಾರ್ಟಿಗಳು ಆದಿತ್ಯ ಆಳ್ವಾ ಅವರ ಒಡೆತನಕ್ಕೆ ಸೇರಿದ ಹೌಸ್ ಆಫ್ ಲೈಫ್ ರೆಸಾರ್ಟ್‍ನಲ್ಲೇ ನಡೆದಿವೆ ಎಂದು ಹೇಳಲಾಗಿದೆ.

ಡ್ರಗ್ ಪ್ರಕರಣದಲ್ಲಿ ಆದಿತ್ಯ ಆಳ್ವ ಎ6 ಆರೋಪಿಯಾಗಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆದಿತ್ಯ ಆಳ್ವ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹುಡುಕಾಟದಲ್ಲಿದ್ದಾರೆ. ಕೆಲವು ವಾರಗಳ ಹಿಂದೆ ಆದಿತ್ಯ ಆಳ್ವ ಬೆಂಗಳೂರು ನಿವಾಸಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top