fbpx
ಸಮಾಚಾರ

75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ)ಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 75ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು.

ಇಂದು ವಿಶ್ವ ಆಹಾರ ದಿನ, ಈ ನಿಟ್ಟಿನಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆ ಕಾರ್ಯಕ್ರಮ ಏರ್ಪಡಿಸಿತ್ತು. ಪ್ರಧಾನ ಮಂತ್ರಿ ಇದೇ ಸಂದರ್ಭದಲ್ಲಿ ದೇಶಕ್ಕೆ ಇತ್ತೀಚೆಗೆ ಅಭಿವೃದ್ಧಿಪಡಿಸಿದ ಜೈವಿಕ ವೈವಿಧ್ಯದ 8 ಪ್ರಬೇಧಗಳನ್ನು ಸಮರ್ಪಿಸಿದರು.

ಇದೇ ವೇಳೆ ಅಭಿವೃದ್ಧಿ ಪಡಿಸಿದ 17 ಹೊಸ ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ, ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ನೀಡಿ ಖರೀದಿಸುವ ಬಗ್ಗೆ ಸರ್ಕಾರದ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.

1945ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ(ಎಫ್​​ಎಓ) ಅಕ್ಟೋಬರ್​ 16ನ್ನು ವಿಶ್ವ ಆಹಾರ ದಿನವನ್ನಾಗಿ ಘೋಷಿಸಿತು. ಅಂದಿನಿಂದ ಈವರೆಗೆ ಪ್ರತಿವರ್ಷ ಅಕ್ಟೋಬರ್ 16ನ್ನು ಅಂತರಾಷ್ಟ್ರೀಯ ಆಹಾರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತೀ ವರ್ಷ ಇದೇ ದಿನದಂದು ಹೊಸ ಸಂಗತಿಯೊಂದಿಗೆ ಆಹಾರ ದಿನವನ್ನು ಆಚರಿಸಲಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top