fbpx
ಸಮಾಚಾರ

ನಿರ್ದೇಶಕ ಪವನ್ ಒಡೆಯರ್ ಪತ್ನಿಗೆ 2ನೇ ಭಾರಿ ಸೀಮಂತ ಕಾರ್ಯಕ್ರಮ!

ಅಪ್ಪ-ಅಮ್ಮ ಆಗುತ್ತಿರುವ ಖುಷಿಯಲ್ಲಿರುವ ನಿರ್ದೇಶಕ ಪವನ್​ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ಅವರ ಮನೆಯಲ್ಲಿ ಸೀಮಂತ ಶಾಸ್ತ್ರ ನಡೆದಿದೆ. ತುಂಬು ಗರ್ಭಿಣಿ ಅಪೇಕ್ಷಾ ಅವರಿಗೆ ಸರಳವಾಗಿ ಸೀಮಂತ ಶಾಸ್ತ್ರ ಮಾಡಲಾಗಿದೆ.

 

 

ಈ ಸುಂದರ ಕ್ಷಣಗಳ ಫೋಟೋವನ್ನು ನಿರ್ದೇಶಕ ಪವನ್ ಒಡೆಯರ್ ಟ್ವಿಟ್ಟರಿನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತುಂಬಾ ಸರಳವಾಗಿ ಸೀಮಂತ ಶಾಸ್ತ್ರ ಮಾಡಲಾಗಿದ್ದು, ಕುಟುಂಬದವರು ಮತ್ತು ಆಪ್ತರು ಮಾತ್ರ ಸೀಮಂತ ಸಂಭ್ರಮದಲ್ಲಿ ಭಾಗಿಯಾಗಿದ್ದರು.

 

 

ಕೆಲ ದಿನಗಳ ಹಿಂದೆಯಷ್ಟೆ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ ತಾವು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ಪವನ್ ಒಡೆಯರ್ ಸೋಶಿಯಲ್ ಮೀಡಿಯಾದ ಮೂಲಕ ಹಂಚಿಕೊಂಡಿದ್ದರು. “ಸದಾ ವಟ ವಟ ಮಾತನಾಡುವ ನಾನು. ಮೌನಿಯಾದ ಕ್ಷಣಗಳು. ಹೌದು ನಮ್ಮ ಜೀವನದ ಅತ್ಯಂತ ಸುಂದರ ದಿನಗಳಿಗಾಗಿ ಹಾತೊರೆಯುತ್ತಿದ್ದೇವೆ. ಮಾತುಗಳಲ್ಲಿ ಆ ಖುಷಿ ಹೇಳಲಾಗದೆ. ಹಾಡಿನ ರೂಪದಲ್ಲಿ ವ್ಯಕ್ತಪಡಿಸುವ ಪ್ರಯತ್ನ ಮಾಡಿದ್ದೇವೆ. ಆ ಮುಗುಳುನಗೆ ಹಾಡಿಗಾಗಿ ನಿರೀಕ್ಷಿಸಿ” ಎಂದು ಬರೆದುಕೊಂಡಿದ್ದರು.

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top