fbpx
ಸಮಾಚಾರ

ಶೂಟಿಂಗ್ ವೇಳೆ ಪೊಲೀಸರ ಜೊತೆ ಕೊರೊನಾ ಜಾಗೃತಿ ಮೂಡಿಸಿದ ಪವರ್ ಸ್ಟಾರ್

ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಮಲ್ಲಾಪುರ ಗ್ರಾಮದ ಬಳಿ ಜೇಮ್ಸ್ ಶೂಟಿಂಗ್ ಭರದಿಂದ ಸಾಗಿದ್ದು, ಬೃಹತ್ ಸೆಟ್‍ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಇನ್ನೂ ಕೆಲ ದಿನಗಳ ಕಾಲ ಚಿತ್ರ ತಂಡ ಗಂಗಾವತಿಯಲ್ಲಿಯೇ ಬೀಡು ಬಿಡಲಿದೆ. ಇದೇ ಗ್ಯಾಪ್‍ನಲ್ಲಿ ಬಿಡುವು ಮಾಡಿಕೊಂಡ ಅಪ್ಪು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಿಂದ ಆಯೋಜಿಸಿದ್ದ ಕೊರೊನಾ ಜಾಥಾದಲ್ಲಿ ಭಾಗವಹಿಸಿ ಜಾಗೃತಿ ಮೂಡಿಸಿದ್ದಾರೆ.

ಪುನೀತ್ ರಾಜ್‍ಕುಮಾರ್ ಆಗಮಿಸುವುದನ್ನು ತಿಳಿದಿದ್ದ ಅಭಿಮಾನಿಗಳು ಹಾಗೂ ಸುತ್ತಲಿನ ಗ್ರಾಮಗಳ ಜನ, ನೆಚ್ಚಿನ ನಟನನ್ನು ಕಂಡು ಕೆಕೆ, ಶಿಳ್ಳೆ, ಚಪ್ಪಾಳೆ ತಟ್ಟುವ ಮೂಲಕ ಖುಷಿಪಟ್ಟರು. ಪುನೀತ್ ಜೊತೆ ಅನುಪ್ರಭಾಕರ್ ಸಹ ಮಾತನಾಡಿ, ಕೋವಿಡ್ ಬಗ್ಗೆ ಜನರಿಗೆ ತಿಳಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top