ಐಪಿಎಲ್ ಕೋಡ್ ಆಫ್ ಕಂಡಕ್ಟ್ ನಿಯಮಗಳನ್ನು ಮುರಿದ ಕಾರಣ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕ್ರಿಸ್ ಗೇಲ್‍ಗೆ ಪಂದ್ಯದ ಶುಲ್ಕದಲ್ಲಿ ಶೇ.10 ರಷ್ಟು ದಂಡವಾಗಿ ವಿಧಿಸಲಾಗಿದೆ.
ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಶುಕ್ರವಾರ (ಅಕ್ಟೋಬರ್ 30) ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 50ನೇ ಪಂದ್ಯದಲ್ಲಿ ಕಿಂಗ್ಸ್ 11 ಪಂಜಾಬ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಕೇವಲ 63 ಎಸೆತಗಳಲ್ಲಿ 99 ರನ್ ಸಿಡಿಸಿದ್ದರು.
99 ರನ್ ಬಾರಿಸಿ ಶತಕದ ಸಮೀಪದಲ್ಲಿದ್ದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್, 19.4ನೇ ಓವರ್‌ನಲ್ಲಿ ಜೋಫ್ರಾ ಆರ್ಚರ್ ಎಸೆತಕ್ಕೆ ಬೌಲ್ಡ್ ಆದರು. ಶತಕದ ಸಮೀಪದಲ್ಲಿ ಔಟಾಗಿದ್ದಕ್ಕೆ ಹತಾಶೆಗೊಂಡ ಗೇಲ್, ಬ್ಯಾಟನ್ನು ನೆಲಕ್ಕೆ ಬಡಿದು ಬೇಸರ ತೋರಿಕೊಂಡಿದ್ದರು.
Just UNIVERSE BOSS things 🤣😂 pic.twitter.com/YusSiSclkw
— Adam Dhoni (@AdamDhoni1) October 30, 2020
ಐಪಿಎಲ್ ಇತಿಹಾಸದಲ್ಲೇ ಇಂತಹ ಅಸಭ್ಯ ತೋರಿದ್ದು, ಗೇಲ್ ಇದೇ ಮೊದಲು ಎನ್ನಲಾಗಿದೆ. ಮೈದಾನದಲ್ಲಿ ಹುಚ್ಚಾಟ ನಡೆಸಿದ್ದರಿಂದ ಗೇಯ್ಲ್ ಗೆ ಪಂದ್ಯದ ಸಂಭಾವನೆಯಲ್ಲಿ ಶೇಕಡ 10ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ನ ನೀತಿ ಸಂಹಿತೆಯ ಲೆವೆಲ್ 1 ಅಪರಾಧ 2.2 ಅನ್ನು ಕ್ರಿಸ್ ಗೇಯ್ಲ್ ಒಪ್ಪಿಕೊಂಡಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
