fbpx
ಸಮಾಚಾರ

ರಿಯಲ್ ಲೈಫ್ ನಲ್ಲಿ ಸಂಪಾದಕಿಯಾದ ನಟಿ ರಶ್ಮಿಕಾ ಮಂದಣ್ಣ

ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಸೊಸೆ ಹಾಗೂ ರಾಮ್‌ಚರಣ್ ತೇಜ ಅವರ ಪತ್ನಿ ಉಪಾಸನಾ ಕಮಿನೇನಿ ಕೊನಿಡೇಲಾ ಅವರೀಗ ಆನ್ಲೈನ್ನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರ ಆ ಸಾಹಸಕ್ಕೆ ಸದ್ಯ ಟ್ರೆಂಡಿಂಗ್ನಲ್ಲಿರುವ ಕನ್ನಡತಿ, ದಕ್ಷಿಣ ಭಾರತ ಖ್ಯಾತ ಚಿತ್ರತಾರೆ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ.

ಉಪಾಸನಾ ಕಮಿಸೇನಿ ಕೋನಿಡೇಲಾ ಅವರು URLife ವೆಬ್ ಮತ್ತು ಸೋಷಿಯಲ್ ಮೀಡಿಯಾವನ್ನು ಪ್ರಾರಂಭಿಸಿದ್ದು ಫಿಟ್‌ನೆಸ್, ಹೆಲ್ತ್ ಟಿಪ್ಸ್, ಆರೋಗ್ಯಕರ ಆಹಾರ .. ಪ್ರೋಟೀನ್ ಭರಿತ ಆಹಾರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅವರು ಈ ಜಾಲತಾಣ ಆರಂಭಿಸಿದ್ದಾರೆ.

ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಉಪಾಸನಾ ಉಸ್ತುವಾರಿ ವಹಿಸಿಕೊಂಡರೆ, ಈ ಹಬ್ಬದ ಸಮಯದಲ್ಲಿ ಅತಿಥಿ ಸಂಪಾದಕಿಯಾಗಿ ಕೊಡಗಿನ ಕುವರಿ, ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರನ್ನು ನೇಮಕ ಮಾಡಿದ್ದಾರೆ.

ಅಂದಹಾಗೆ, URLife ಎಂಬುದು ಒಂದು ಆರೋಗ್ಯಕರ ವೇದಿಕೆ. ಇಲ್ಲಿ ಆಯ್ದ ಕೆಲ ಕ್ಷೇತ್ರಗಳ ನುರಿತ ಪರಣಿತರು, ವೈದ್ಯರು ಸದ್ಯದ ಲೈಫ್​​ಸ್ಟೈಲ್, ತಂತ್ರಜ್ಷಾನದ ಬಗ್ಗೆ ಈ ವೇದಿಕೆ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಓದುಗರಿಗೆ ಅತ್ಯುತ್ತಮವಾದ ಡಯಟ್​ ಟಿಪ್ಸ್, ನುರಿತವರಿಂದ ಉಪಯುಕ್ತ ಮಾಹಿತಿ, ಉಚಿತ ತರಗತಿಗಳು, ವಿಡಿಯೋ ಮಾಹಿತಿ, ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯೂ ಬೆರಳ ತುದಿಯಲ್ಲಿಯೇ URLife ನಲ್ಲಿ ಲಭ್ಯವಾಗಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top