fbpx
ಸಮಾಚಾರ

2000 ಹುದ್ದೆಗಳ ನೇಮಕಾತಿಗೆ SBI ಅರ್ಜಿ ಆಹ್ವಾನ

ದೇಶದ ಅತಿದೊಡ್ಡ ಸಾರ್ವಜನಿಕ ಬ್ಯಾಂಕ್ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2000 ಪ್ರೊಬೇಷನರಿ ಆಫೀಸರ್‌ (ಪಿಓ) ನೇಮಕಾತಿಗಾಗಿ ಆನ್‌ಲೈನ್ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್ 4,2020 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಡಿಸೆಂಬರ್ 31,2020ರ ಅನ್ವಯ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಏಪ್ರಿಲ್ 1,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. -ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 12 ವರ್ಷ ಮತ್ತು ಅಂಗವಿಕಲ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ ಶ್ರೇಣಿ:
27,620 ರಿಂದ 42,020 ರೂ ತಿಂಗಳಿಗೆ. ಇದರ ಜೊತೆಗೆ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳುನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಪ್ಲಿಕೇಶನ್‌ ಶುಲ್ಕ ಎಷ್ಟು?
ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಎಸ್‌ಬಿಐ ಅಫೀಶಿಯಲ್ ವೆಬ್‌ಸೈಟ್‌ https://www.sbi.co.in/web/careers ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top