fbpx
ಸಮಾಚಾರ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣ ಖಾತೆಗಳು ಹ್ಯಾಕ್

ಈಚೆಗೆ ಸೆಲೆಬ್ರಿಟಿಗಳ ಸೋಶಿಯಲ್ ಮೀಡಿಯಾ ಖಾತೆಗಳು ಹ್ಯಾಕ್ ಆಗುವುದು ಸಾಮಾನ್ಯವಾಗಿ ಬಿಟ್ಟಿದೆ. ನಟಿಯರಾದ ಮಾನ್ವಿತಾ ಕಾಮತ್, ಆಶಿಕಾ ರಂಗನಾಥ್, ನಟ ದೀಕ್ಷಿತ್ ಶೆಟ್ಟಿ ಮುಂತಾದ ಸೆಲೆಬ್ರಿಟಿಗಳ ಸಾಮಾಜಿಕ ಜಾಲತಾಣದ ಖಾತೆಗಳನ್ನು ಹ್ಯಾಕರ್‌ಗಳು ಹ್ಯಾಕ್ ಮಾಡಿದ್ದರು. ಇದೀಗ ಸೈಬರ್‌ ಕಳ್ಳರು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರ ಸೋಶಿಯಲ್ ಮೀಡಿಯಾದ ಖಾತೆಗಳನ್ನು ಹ್ಯಾಕ್ ಮಾಡಿದ್ದಾರೆ. ಈ ಬಗ್ಗೆ ಸ್ವತಃ ವಿಜಯಲಕ್ಷ್ಮೀ ಅವರೇ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಸ್ವತಃ ವಿಜಯಲಕ್ಷ್ಮಿ ಅವರೇ ಖಚಿತಪಡಿಸಿದ್ದು, ಆತ್ಮೀಯರೇ, ನನ್ನ ಸಾಮಾಜಿಕ ಜಾಲತಾಣಗಳ ಯಾವುದೇ ಖಾತೆಯಿಂದ ಆಕ್ಷೇಪಾರ್ಹ ಪೋಸ್ಟ್ ಅಥವಾ ಸಂದೇಶಗಳು ಬಂದಲ್ಲಿ ದಯವಿಟ್ಟು ಕ್ಷಮಿಸಿ, ಸಾಮಾಜಿಕ ಜಾಲತಾಣಗಳ ಖಾತೆಗಳು ಹ್ಯಾಕ್ ಆಗಿವೆ ಎಂದು ಬರೆದಿದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್ ಆಗಿದ್ದು, ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದ ಕುರಿತು ಸಹ ಆಗಾಗ ಅಪ್‍ಡೇಟ್ ನೀಡುತ್ತಿರುತ್ತಾರೆ. ಆದರೆ ಇದೀಗ ಇದ್ದಕ್ಕಿದ್ದಂತೆ ಅಕೌಂಟ್ ಹ್ಯಾಕ್ ಆಗಿರುವ ಕುರಿತು ತಿಳಿಸಿ, ಅಭಿಮಾನಿಗಳನ್ನು ಅಚ್ಚರಿ ಪಡುವಂತೆ ಮಾಡಿದ್ದಾರೆ.

ವಿಜಯಲಕ್ಷ್ಮಿ ಟ್ವಿಟ್ಟರ್​ ಖಾತೆಯನ್ನ 61 ಸಾವಿರ ಜನ ಫಾಲೋ ಮಾಡುತ್ತಿದ್ದು, ವಿಜಯಲಕ್ಷ್ಮಿ ಮಾತ್ರ ತಮ್ಮ ಬ್ಯುಸಿನೆಸ್​ ಅಕೌಂಟ್​ ಪೇಜ್​ ‘ಮೈ ಫ್ರೆಶ್​ ಬಾಸ್ಕೆಟ್’​ ಮಾತ್ರ ಫಾಲೋ ಮಾಡ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top