fbpx
ಸಮಾಚಾರ

ಪ್ಯಾನ್ ಇಂಡಿಯಾ ಸಿನಿಮಾದ ಬಗ್ಗೆ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ ನಟ ಜಗ್ಗೇಶ್

ಇತ್ತೀಚಿನ ವರ್ಷಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಎಂಬ ಪರಿಕಲ್ಪನೆ ಟ್ರೆಂಡ್ ಆಗಿದೆ. ಒಂದು ಭಾಷೆಯಲ್ಲಿ ಸಿನಿಮಾ ತಯಾರಿಸಿದರೂ ಅದನ್ನು ನಾಲ್ಕೈದು ಭಾಷೆಗೆ ಡಬ್ ಮಾಡಿ ಬಿಡುಗಡೆ ಮಾಡುವುದು ಸಂಪ್ರದಾಯವಾಗಿದೆ. ಈ ಬಗ್ಗೆ ನಟ ಜಗ್ಗೇಶ್​ ವಿರೋಧ ವ್ಯಕ್ತ ಪಡಿಸಿದ್ದಾರೆ.

ಚಿತ್ರರಂಗ ಪ್ರವೇಶಿಸಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ತಮ್ಮ ಅನುಭವ ಹಂಚಿಕೊಂಡರು. ಈ ವೇಳೆ ಪ್ಯಾನ್ ಇಂಡಿಯಾ ಕುರಿತ ಅಸಮಾಧಾನ ವ್ಯಕ್ತಪಡಿಸಿದರು. ಕನ್ನಡ ಸಿನಿಮಾರಂಗ ಹಾಗೂ ಕನ್ನಡ ಕಲಾವಿದರನ್ನು ಉಳಿಸುವಂತಹ ಕೆಲಸ ಆಗಬೇಕಿದೆ ‘ಪ್ಯಾನ್ ಇಂಡಿಯಾ ನಮ್ಮನ್ನ ಉದ್ದಾರ ಮಾಡಲ್ಲ’ ಎಂದು ಖಂಡಿಸಿದರು.

”ಯಾವುದು ಅದು ಪ್ಯಾನ್‌ ಇಂಡಿಯಾ…? ಪ್ಯಾನ್ ಇಂಡಿಯಾ ಸಿನಿಮಾ ಬಂದು ನಮ್ಮನ್ನ ಉದ್ದಾರ ಮಾಡಲ್ಲ. ಪ್ಯಾನ್ ಇಂಡಿಯಾದಿಂದ ನಮ್ಮ‌ ಕನ್ನಡಿರಿಗೆ ಕೆಲಸ ಇಲ್ಲ..ಯಾರನ್ನೋ‌ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಸಿನಿಮಾ ಮಾಡೋ ಹಾಗಿದೆ. ಇದರಿಂದ ನಮ್ಮ‌ ನೆಲದ ಜನರಿಗೆ ಕೆಲಸ ಇಲ್ಲದಂತಾಗಿದೆ” ಎಂದು ನಟ ಜಗ್ಗೇಶ್ ಕಿಡಿ ಕಾರಿದರು.

ಕನ್ನಡ ಚಿತ್ರೋದ್ಯಮ ಹಾಗೂ ಕನ್ನಡ ಮಾಧ್ಯಮಗಳು ನಮ್ಮತನವನ್ನು ಉಳಿಸಿಕೊಳ್ಳಬೇಕಿದೆ. ನಮ್ಮವರ ಬೆಂಬಲಕ್ಕೆ ನಿಲ್ಲಬೇಕಿದೆ. ಮುಂದಿನ ಪೀಳಿಗೆ ಬೆಳೆಯಬೇಕಿದೆ. ಈ ಬಗ್ಗೆ ಗಮನ ಕೊಡಿ ಎಂದು ಮನವಿ ಮಾಡಿಕೊಂಡರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top