fbpx
ಸಮಾಚಾರ

ಸಿಎಂ BSY ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸಂತೋಷ್ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬೆಂಗಳೂರಿನ ಎಮ್.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಷಯ ತಿಳಿದ ತಕ್ಷಣ ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ಧಾವಿಸಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್​ ಚೆನ್ನಾಗಿ ಮಾತಾಡುತ್ತಿದ್ದಾನೆ. ಹಾಗೂ ಅವರ​​ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಖುಷಿಯಾಗಿಯೇ ಚೆನ್ನಾಗಿಯೇ ಇದ್ದ, ಆದರೆ ಈಗ ಹೀಗಾಗಿದೆ ಎಂದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರ ಪತ್ನಿ ಜಾಹ್ನವಿ “ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ. ಸ್ವಲ್ಪ ರಾಜಕೀಯದಲ್ಲಿ ಅಸಮತೋಲನ ಆಗಿತ್ತು. ಅದನ್ನು ಮನಸ್ಸಿಗೆ ತೆಗೆದುಕೊಂಡಿದ್ದಾರಷ್ಟೆ, ನಾವು ಕೌಟುಂಬಿಕವಾಗಿ ತುಂಬಾ ಚೆನಾಗಿದ್ದೇವೆ ಎಂದು ತಿಳಿಸಿದ್ದಾರೆ. ” ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಪತಿ ಸಂತೋಷ್‌ ಅವರನ್ನು ಎಂಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಮಾತನಾಡಿದ ಅವರು, “ಸಂತೋಷ ಶುಕ್ರವಾರ ಬೆಳಗ್ಗೆಯಿಂದಲೂ ಸ್ವಲ್ಪ ಬೇಜಾರಲ್ಲಿದ್ದರು. ಸಂಜೆ ಹೊರಗಡೆ ಹೋಗಿ 7 ಗಂಟೆಗೆ ಮನೆಗೆ ಬಂದರು. ಊಟಕ್ಕೆ ಏನು ಮಾಡಲಿ ಅಂತ ಕೇಳಲು ಹೋದಾಗ ಅವರು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದೆವು” ಎಂದು ಜಾಹ್ನವಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top