fbpx
ಸಮಾಚಾರ

ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲು

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್‌.ಆರ್. ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿರುವ ಆರೋಪದಡಿ ಐಪಿಸಿ ಸೆಕ್ಷನ್ 309 ಅಡಿ ಕೇಸು ದಾಖಲಿಸಿದ್ದಾರೆ.

ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಸಿದ್ದರು. ಖುಡಲೇ ಅವರನ್ನು ಮನೆಯವರು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರ ಪತ್ನಿ ಜಾಹ್ನವಿ “ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ. ಸ್ವಲ್ಪ ರಾಜಕೀಯದಲ್ಲಿ ಅಸಮತೋಲನ ಆಗಿತ್ತು. ಅದನ್ನು ಮನಸ್ಸಿಗೆ ತೆಗೆದುಕೊಂಡಿದ್ದಾರಷ್ಟೆ, ನಾವು ಕೌಟುಂಬಿಕವಾಗಿ ತುಂಬಾ ಚೆನಾಗಿದ್ದೇವೆ ಎಂದು ತಿಳಿಸಿದ್ದಾರೆ. ” ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಪತಿ ಸಂತೋಷ್‌ ಅವರನ್ನು ಎಂಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಮಾತನಾಡಿದ ಅವರು, “ಸಂತೋಷ ಶುಕ್ರವಾರ ಬೆಳಗ್ಗೆಯಿಂದಲೂ ಸ್ವಲ್ಪ ಬೇಜಾರಲ್ಲಿದ್ದರು. ಸಂಜೆ ಹೊರಗಡೆ ಹೋಗಿ 7 ಗಂಟೆಗೆ ಮನೆಗೆ ಬಂದರು. ಊಟಕ್ಕೆ ಏನು ಮಾಡಲಿ ಅಂತ ಕೇಳಲು ಹೋದಾಗ ಅವರು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದೆವು” ಎಂದು ಜಾಹ್ನವಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top