fbpx
ಸಮಾಚಾರ

ಬಿಬಿಎಂಪಿ ಬೃಹತ್ ನೇಮಕಾತಿ: 1322 ಹುದ್ದೆಗಳಿಗೆ ಅರ್ಜಿ ಅಹ್ವಾನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 1322 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು

ಹುದ್ದೆಯ ಹೆಸರು: ಆಶಾ ಕಾರ್ಯಕರ್ತೆ
ಹುದ್ದೆಗಳ ಸಂಖ್ಯೆ: 1322

ವಿದ್ಯಾರ್ಹತೆ:
ಮಾನ್ಯತೆ ಪಡೆದ ಸಂಸ್ಥೆಯಿಂದ 8ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕನಿಷ್ಠ 25 ವರ್ಷ ಆಗಿರಬೇಕು. ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಸಲ್ಲಿಕೆ ಹೇಗೆ?
ಮೂಲ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಗೆ ಹತ್ತಿರವಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ತದನಂತರ ದಾಖಲಾತಿಗಳನ್ನು ಪರಿಶೀಲಿಸಿ ಅಭ್ಯರ್ಥಿಯು ಅರ್ಹರಿದ್ದಲ್ಲಿ ಆಶಾ ಕಾರ್ಯಕರ್ತೆಯರಾಗಿ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ನವೆಂಬರ್ 24ರಿಂದ ಅರ್ಜಿಗಳನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಕಳಿಸಬಹುದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top