ಮಾಜಿ ಶಾಸಕ ವೈಎಸ್ವಿ ದತ್ತ ಜೆಡಿಎಸ್ ತೊರೆಯುತ್ತಾರೆ ಎಂಬ ಊಹಾಪೋಹಕ್ಕೆ ಸ್ವತಃ ಅವರೇ ಬ್ರೇಕ್ ಹಾಕಿದ್ದಾರೆ. ಕೆಲವು ದಿನಗಳಿಂದ ರಾಜಕೀಯವಾಗಿ ಅಷ್ಟೇನು ಸಕ್ರಿಯವಾಗಿಲ್ಲದ ದತ್ತ ಜೆಡಿಎಸ್ ಪಕ್ಷವನ್ನು ತೊರೆಯುತ್ತಾರೆ ಎಂಬ ಸುದ್ದಿ ಹರಿದಾಡಿದ್ದವು. ಕೆಲವು ಮಾಧ್ಯಮಗಳಲ್ಲೂ ಈ ವರದಿ ಪ್ರಸಾರ ಆಗಿತ್ತು. ಆದರೆ ಸ್ವತಃ ದತ್ತಾ ಅವರೇ ಇದನ್ನು ನಿರಾಕರಣೆ ಮಾಡಿದ್ದಾರೆ.
ನೆನ್ನೆ ರಾತ್ರಿ ತಾನೆ ದೇವೇಗೌಡರ ಮನೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಮಾತನಾಡಿಕೊಂಡು ಬಂದಿದ್ದೇನೆ. ನನ್ನ ತಲೆಯಲ್ಲಿ ಇದುವರೆಗೂ ಬಂದಿಲ್ಲದ ಆಲೋಚನೆಯನ್ನು ಟಿವಿ ಅವರು ಒಂದು ಸುದ್ದಿ ಅಂತ ಪ್ರಸಾರ ಮಾಡಿದ್ದಾರೆ. 1/2 pic.twitter.com/RytjvVc4zu
— YSV Datta (@YSV_Datta) December 1, 2020
ಕಡೂರು ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ನಾಯಕ ವೈ. ಎಸ್. ವಿ. ದತ್ತಾ ಮಂಗಳವಾರ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ದತ್ತಾ ಅವರು ಜೆಡಿಎಸ್ ಪಕ್ಷ ತೊರೆಯಲಿದ್ದಾರೆ ಎಂಬ ಕೆಲವು ಟಿವಿ ವಾಹಿನಿಗಳ ಸುದ್ದಿಗಳಿಗೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
“ನೆನ್ನೆ ರಾತ್ರಿ ತಾನೆ ದೇವೇಗೌಡರ ಮನೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಮಾತನಾಡಿಕೊಂಡು ಬಂದಿದ್ದೇನೆ. ನನ್ನ ತಲೆಯಲ್ಲಿ ಇದುವರೆಗೂ ಬಂದಿಲ್ಲದ ಆಲೋಚನೆಯನ್ನು ಟಿವಿ ಅವರು ಒಂದು ಸುದ್ದಿ ಅಂತ ಪ್ರಸಾರ ಮಾಡಿದ್ದಾರೆ”
ಸುದ್ದಿಯನ್ನು ಇವರೇ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮದೊಂದು ಪ್ರತಿಕ್ರಿಯೆ ಕೇಳಬೇಕಲ್ಲವೇ ?? ಸುಮ್ಮನೆ ಇವನ್ನೆಲ್ಲ ನಿರ್ಲಕ್ಷಿಸಿ. @JanataDal_S ಪಕ್ಷ ಸಂಘಟನೆ ಕಡೆ ಗಮನ ಕೊಡೋಣ.ಮೊನ್ನೆ ಪಕ್ಷ ಸಂಘಟನೆ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದೇನೆ ಅದರ ಕಡೆ ಗಮನ ಕೊಡೋಣ. 2/2
— YSV Datta (@YSV_Datta) December 1, 2020
“ಸುದ್ದಿಯನ್ನು ಇವರೇ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮದೊಂದು ಪ್ರತಿಕ್ರಿಯೆ ಕೇಳಬೇಕಲ್ಲವೇ ?? ಸುಮ್ಮನೆ ಇವನ್ನೆಲ್ಲ ನಿರ್ಲಕ್ಷಿಸಿ. JDS ಪಕ್ಷ ಸಂಘಟನೆ ಕಡೆ ಗಮನ ಕೊಡೋಣ.ಮೊನ್ನೆ ಪಕ್ಷ ಸಂಘಟನೆ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದೇನೆ ಅದರ ಕಡೆ ಗಮನ ಕೊಡೋಣ ” ಎಂದು ದತ್ತಾ ಅವರು ಟ್ವೀಟ್ ಮಾಡಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
