fbpx
ಸಮಾಚಾರ

“ಕೊರೋನಾ ಲಸಿಕೆಯನ್ನು ಇಡೀ ದೇಶದ ಜನರಿಗೆ ನೀಡುವುದಾಗಿ ಎಂದೂ ಹೇಳೇ ಇಲ್ಲ” ಉಲ್ಟಾ ಹೊಡೆದ ಕೇಂದ್ರ ಸರ್ಕಾರ

ದೇಶದ ಎಲ್ಲ ಪ್ರಜೆಗಳಿಗೆ ಕೊರೊನಾ ಲಸಿಕೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕರೋನಾ ಲಸಿಕೆ ಬಂದ ನಂತರ ದೇಶದ ಎಲ್ಲ ಜನರಿಗೆ ಲಸಿಕೆ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಜನರಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿಕೆ ತಿಳಿಸಿದ್ದಾರೆ.

ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐಸಿಎಂಆರ್‌ ನಿರ್ದೇಶಕ ಬಲರಾಮ್‌ ಭಾರ್ಗವ್‌ ಮತ್ತು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ದೇಶದಲ್ಲಿ ಎಲ್ಲ ಪ್ರಜೆಗಳಿಗೆ ಲಸಿಕೆ ನೀಡುವ ಬಗ್ಗೆ ಮಾತನಾಡಿಲ್ಲ. ಈ ವಿಚಾರದ ಬಗ್ಗೆ ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕೇ ಹೊರತು ಒಟ್ಟಾರೆಯಾಗಿ ಮಾತನಾಡಬಾರದು ಎಂದು ಹೇಳಿದರು.

‘ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂದು ನಾನು ಇದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ.ವಾಸ್ತವಿಕ ಮಾಹಿತಿಯ ಆಧಾರದ ಮೇಲೆ ನಾವು ಇಂತಹ ವೈಜ್ಞಾನಿಕ ವಿಷಯಗಳನ್ನು ಚರ್ಚಿಸುವುದು ಬಹಳ ಮುಖ್ಯ ”ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದರು.

ಅಂದಹಾಗೆ ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಬಿಜೆಪಿ ನಾಯಕರು ತಾವು ಗೆದ್ದರೆ ಇಡೀ ಬಿಹಾರಕ್ಕೆ ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಘೋಷಣೆ ಮಾಡಿತ್ತು. ಈ ಘೋಷಣೆಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಿಗೆ ಮತ್ತೊಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕರು ಇಡೀ ದೇಶಕ್ಕೆ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಭರವಸೆ ನೀಡಿದ್ದರು.

“ಇದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ವಿಜ್ಞಾನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ ಮುನ್ನ ವಾಸ್ತವ ಮಾಹಿತಿಗಳನ್ನು ತಿಳಿದುಕೊಂಡು ವಿಶ್ಲೇಷಿಸಬೇಕಾಗುತ್ತದೆ. ಆದ್ದರಿಂದ ಇಡೀ ದೇಶದಲ್ಲಿ ಲಸಿಕೆ ಹಾಕಿಸುವ ಬಗ್ಗೆ ಎಂದೂ ಮಾತನಾಡಿಲ್ಲ. ಆರಂಭಿಕ ಹಂತದಲ್ಲಿ ಸಣ್ಣ ಸಂಖ್ಯೆಯ ಜನತೆಗಷ್ಟೇ ಲಸಿಕೆ ಹಾಕಲಾಗುತ್ತದೆ ಹಾಗೂ ಮಾಸ್ಕ್ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಹೇಳಿದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top