fbpx
ಸಮಾಚಾರ

ರಾಷ್ಟ್ರಗೀತೆಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪತ್ರ

ನಮ್ಮ ರಾಷ್ಟ್ರಗೀತೆ ‘ಜನ ಗಣ ಮನ’ ವನ್ನು ಬದಲಾಯಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ಇರುವ ರಾಷ್ಟ್ರಗೀತೆಯನ್ನು ಬದಲಾಯಿಸಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಬರೆದಿರುವ ಪತ್ರ ತೀವ್ರ ಚರ್ಚೆಯ ವಿಷಯವಾಗಿದೆ.

ರಾಷ್ಟ್ರಗೀತೆಯಲ್ಲಿ ಕೆಲ ಅನಗತ್ಯ ಪದಗಳು ಸೇರಿಕೊಂಡಿವೆ…. ಗೀತೆಯಲ್ಲಿರುವ ಕೆಲವು ಪದಗಳಿಗೆ ಸಂಬಂಧಿಸಿದ ಪ್ರದೇಶಗಳು ಪಾಕಿಸ್ತಾನದಲ್ಲಿರುವುದರಿಂದ ಆ ಅನಗತ್ಯ ಪದಗಳನ್ನು ರಾಷ್ಟ್ರಗೀತೆಯಿಂದ ತೆಗೆದುಹಾಕುವಂತೆ ಕೋರಿ ಸುಬ್ರಮಣ್ಯಸ್ವಾಮಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

 

 

ರಾಷ್ಟ್ರಗೀತೆ ‘ಜನಗಣಮನ’ ದಲ್ಲಿ ನಾವು ಹಾಡುವ “ಸಿಂಧು” ಎಂಬ ಪ್ರದೇಶ ಈಗ ಪಾಕಿಸ್ತಾನದ ಭಾಗವಾಗಿರುವ ಕಾರಣ ಅದನ್ನು ನಾವು ಹೊಗಳುವ ಅಗತ್ಯವಿಲ್ಲ. ಆ ಪದ ತೆಗೆದು “ಈಶಾನ್ಯ” ಎಂಬ ಪದವನ್ನು ಸೇರಿಸಬೇಕು ಎಂದು 2019 ರಲ್ಲಿ ಕಾಂಗ್ರೆಸ್ ಸಂಸದ ರಿಪುನ್ ಬೋರಾ ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯರ ವಿಧೇಯಕ ಮಂಡಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಷ್ಟ್ರಗೀತೆ ‘ಜನ ಗಣ ಮನ’ದಲ್ಲಿನ ಪದಗಳನ್ನು ತಿದ್ದುಪಡಿ ಮಾಡಬಹುದು ಅಥವಾ ಭವಿಷ್ಯದಲ್ಲಿ ಇತರ’ ಸೂಕ್ತ ಪದಗಳೊಂದಿಗೆ ‘ಬದಲಾಯಿಸಬಹುದು ಎಂದು ಸೂಚಿಸಿದ ಡಾ.ರಾಜೇಂದ್ರ ಪ್ರಸಾದ್ ಅವರ ಮಾತುಗಳನ್ನು ಸ್ವಾಮಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top