fbpx
ಸಮಾಚಾರ

ಮತ್ತೊಂದು ಸಚಿನ್ ದಾಖಲೆ ಮುರಿದು ಸಾರ್ವಕಾಲಿಕ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆ ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೆ ವೇಗವಾಗಿ 12 ಸಾವಿರ ರನ್‌ಗಳ ಗಡಿಯನ್ನು ದಾಟಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ಮೊದಲ ಸ್ಥಾನಲ್ಲಿದ್ದರು. ಆದರೆ ಈಗ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ 23 ರನ್‌ ಗಳಿಸುವ ಮೂಲಕ ಈ ಪಟ್ಟಿಯಲ್ಲಿ ನಂಬರ್‌ ಒನ್‌ ಸ್ಥಾನಕ್ಕೆ ಏರಿದ್ದಾರೆ.

 

 

ಈ ಹಿಂದೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ಈ ಸಾಧನೆಯನ್ನು ಮಾಡಲು 300 ಪಂದ್ಯಗಳಷ್ಟು ಕಾಲಾವಕಾಶ ತೆಗೆದುಕೊಂಡಿದ್ದರು. ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿ ತನ್ನ ವೃತ್ತಿ ಜೀವನದ 251 ನೇ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 314 ಇನ್ನಿಂಗ್ಸ್, ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ 336 ಇನ್ನಿಂಗ್ಸ್, ಸನತ್ ಜಯಸೂರ್ಯ 379 ಇನ್ನಿಂಗ್ಸ್ ಮತ್ತು ಮಹೇಲಾ ಜಯವರ್ಧನೆ 399 ಇನ್ನಿಂಗ್ಸ್ ಗಳಲ್ಲಿ 12 ಸಾವಿರ ರನ್‌ಗಳ ಗಡಿ ದಾಟಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top