fbpx
ಸಮಾಚಾರ

ರಾಮನಗರ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ಭರ್ತಿಗೆ ಅರ್ಜಿ ಅಹ್ವಾನ

ರಾಮನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ 153 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

17 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 27 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 109 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಒಟ್ಟು 153 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಡಿಸೆಂಬರ್ 24, 2020ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ :
ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ :
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

ಅರ್ಜಿ ಸಲ್ಲಿಸುವುದು ಹೇಗೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top