fbpx
ಸಮಾಚಾರ

ಕಾಂಗ್ರೆಸ್ ಮುಖಂಡ ರಾಕಿಬ್ ಜಾಕಿರ್ ಬಂಧನ

ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು. ಈಗ ಕಾಂಗ್ರೆಸ್ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸುವ ಮೂಲಕ ಮಹತ್ವದ ಬೆಳವಣಿಗೆಯಾಗಿದೆ.

ಡಿ.ಜೆ. ಹಳ್ಳಿ ಗಲೆಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಕಾರ್ಪೋರೇಟರ್‌ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿತ್ತು. ವಿಚಾರಣೆ ಎದುರಿಸದೇ ತಲೆ ಮರೆಸಿಕೊಂಡಿದ್ದರು. ಬುಧವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಪೊಲೀಸರು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ.

ಇನ್ನು ಆಗಸ್ಟ್ 11 ರಂದು ನಡೆದಿದ್ದ ಡಿಜೆಹಳ್ಳಿ ಕೆಜೆಹಳ್ಳಿ ಗಲಭೆ ವೇಳೆ ಜಾಕೀರ್ ಅವರ ವಾಟ್ಸ್ಯಾಪ್​​​ಗೆ ಸಾವಿರಾರು ಸಂದೇಶಗಳು ಬಂದಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಸಿಸಿಬಿ ಅವರ ಮೊಬೈಲ್ ಜಪ್ತಿ ಮಾಡಿದೆ. ನಿನ್ನೆ ಕೊನೆಗೂ ಜಾಕಿರ್​ ಅರೆಸ್ಟ್​ ಆಗಿದ್ದು, ಸದ್ಯ ಸಿಸಿಬಿ ಕಸ್ಟಡಿಯಲ್ಲಿದ್ದಾರೆ.

ಅಂದಹಾಗೆ ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಆ. 11ರಂದು ರಾತ್ರಿ ನುಗ್ಗಿದ್ದ ದುಷ್ಕರ್ಮಿಗಳು, ಬೆಂಕಿ ಹಚ್ಚಿದ್ದರು. ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಸಿಸಿಬಿ ವಿಶೇಷ ತಂಡ ಪ್ರಕರಣದ ತನಿಖೆ ಕೈಗೊಂಡಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top