fbpx
ಸಮಾಚಾರ

ತಾಯಿ ಆಗ್ತಿದ್ದಾರೆ ಬಿಗ್‌ ಬಾಸ್‌ ಅಕ್ಷತಾ ಪಾಂಡವಪುರ: ಸೀಮಂತ ಶಾಸ್ತ್ರದ ಫೋಟೋಗಳು ವೈರಲ್

ಬಿಗ್ ಬಾಸ್ ಸೀಸನ್ 6 ಖ್ಯಾತಿಯ ಸ್ಪರ್ಧಿ ಅಕ್ಷತಾ ಪಾಂಡವಪುರ ಅಮ್ಮ ಆಗ್ತಿದ್ದಾರೆ. ರಂಗಭೂಮಿ ಹಿನ್ನಲೆಯಿಂದ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಆಗಮಿಸಿದ್ದ ಅಕ್ಷತಾ ಅವರಿಗೆ ಇತ್ತೀಚಿಗಷ್ಟೇ ಸೀಮಂತ ಶಾಸ್ತ್ರ ನೆರವೇರಿದ್ದು ಸರಳವಾಗಿ ನೆರವೇರಿಗೆ ಸೀಮಂತ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

 

ಸೀಮಂತ ಕಾರ್ಯಕ್ರಮಕ್ಕೆ ಕೇವಲ ಕುಟುಂಬ ವರ್ಗ ಮತ್ತು ಆಪ್ತರನ್ನು ಮಾತ್ರ ಆಹ್ವಾನಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಸೀಸನ್ 6 ಮತ್ತೊಬ್ಬ ಸ್ಪರ್ಧಿ ಗಾಯಕ ನವೀನ್ ಸಜ್ಜು ಕೂಡ ಭಾಗವಹಿಸಿ ಅಕ್ಷತಾ ಅವರಿಗೆ ಶುಭಾಶಯ ಕೋರಿದರು. ಸೀಮಂತ ಫೋಟೋಗಳನ್ನು ಗಾಯಕ ನವೀನ್ ಸಜ್ಜು ಶೇರ್ ಮಾಡಿಕೊಂಡಿದ್ದಾರೆ.

ಇನ್ನು 8 ತಿಂಗಳ ಅಕ್ಷತಾ ತುಂಬಾನೇ ಡಿಫರೆಂಟ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಅಕ್ಷತಾ ಅವರು ‘ಈ ವಿಸ್ಮಯ ಜಗತ್ತಿನಲ್ಲಿ ಮತ್ತೊಂದು ವಿಸ್ಮಯ ಅಂದ್ರೆ ಮತ್ತೆಂದೂ ಬಾರದ ಈ ಘಳಿಗೆ…ಇನ್ನೂ ಜನವರಿ 2021ಕ್ಕೆ ಮತ್ತೊಂದು ವಿಶೇಷ ಘಳಿಗೆಯ ನಿರೀಕ್ಷೆಯ…ಲ್ಲಿ’ ಎಂದು ಬರೆದುಕೊಂಡಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top