fbpx
ಸಮಾಚಾರ

ಜೈಲು ವಾಸದಲ್ಲಿರುವ ನಟಿ ರಾಗಿಣಿಗೆ ಮತ್ತೊಂದು ಕಹಿ ಸುದ್ದಿ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಇನ್ನೂ ಒಂದು ತಿಂಗಳು ಜೈಲೇ ಗಟ್ಟಿಯಾಗಿದ್ದು, ನಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಕೂಡ ನಟಿ ಜೈಲಿನಲ್ಲಿ ಬರಮಾಡಿಕೊಳ್ಳಲಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗಾಗಿ ಹೈಕೋರ್ಟ್ ಗೆ ಸಲ್ಲಿಸಿದ್ದಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.
ಇದರಿಂದ ಸುಪ್ರೀಂ ಕೋರ್ಟ್ ಗೆ ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನೆನ್ನೆ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ಜನವರಿಗೆ ಮುಂದೂಡಿಕೆ ಮಾಡಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯಿದೆಗಳಡಿಯಲ್ಲಿ ರಾಗಿಣಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top