fbpx
ಸಮಾಚಾರ

ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ತುಟಿಬಿಚ್ಚಿಲ್ಲವೇಕೆ: ನಟ ಚೇತನ್ ಕಿಡಿ

ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಇಡೀ ದೇಶದ ರೈತರು ಕಳೆದ 12 ದಿನಗಳಿಂದ ದೆಹಲಿಯಲ್ಲಿ ಉಗ್ರ ಹೋರಾಟ ಮಾಡುತ್ತಿದ್ದಾರೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಇಂದು ಟ್ವೀಟ್ ಮಾಡಿರುವ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್, “ಕನ್ನಡ ಚಲನಚಿತ್ರ ನಟರು ಚುನಾವಣಾ ಪ್ರಚಾರಕ್ಕೆ ವೇಗವಾಗಿ ಸ್ಪಂಧಿಸುತ್ತಾರೆ. ಆದರೆ, ಆದರೆ, ರೈತರ ಪರವಾಗಿ ಒಂದೂ ಮಾತನ್ನು ಆಡಿಲ್ಲ” ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

 

”ಕೇಂದ್ರ ಕೃಷಿ ಮಸೂದೆಯನ್ನು ಖಂಡಿಸಿ ರೈತರು ಕಳೆದ ಹಲವು ತಿಂಗಳುಗಳಿಂದ ದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಚುನಾವಣಾ ಪ್ರಚಾರದ ಬ್ಯಾಂಡ್‌ವ್ಯಾಗನ್‌ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಸಂಸತಪಡಿಸುವುದಕ್ಕಷ್ಟೇ ಆಸಕ್ತಿ ತೋರಿಸುತ್ತೇವೆಯೇ?” ಎಂದು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ನಟ ದರ್ಶನ್, ನಟಿ ಅಮೂಲ್ಯ, ರಾಕ್‌ಲೈನ್ ವೆಂಕಟೇಶ್ ಅವರುಗಳು ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top