fbpx
ಸಮಾಚಾರ

ಶ್ರೀ ಧರ್ಮಸ್ಥಳ ಮಂಜುನಾಥ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಡಿ.10ರಿಂದ ಆರಂಭ.

ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ, ಲಕ್ಷದೀಪೋತ್ಸವ ಡಿ.10 ರಿಂದ ಡಿ.14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳ 88ನೇ ಅಧಿವೇಶನ ಕೋವಿಡ್ ಹಿನ್ನೆಲೆ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ನೆರವೇರಲಿದೆ.

ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗದೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ವಿವಿಧ ವಿಚಾರಗಳ ಕುರಿತು ಮಾಹಿತಿ ಉಣ ಬಡಿಸುವ ಕಾರ್ಯಕ್ರಮವಾಗಿಯೂ ಈ ಲಕ್ಷ ದೀಪೋತ್ಸವ ಮೂಡಿ ಬಂದಿದೆ. 5 ದಿನಗಳ ಕಾಲ ವಿಜೃಂಭಣೆಯಿಂದ ನಡೆಯುವ ಈ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮೇಳ, ಸಾಹಿತ್ಯ ಸಮ್ಮೇಳನ, ಸರ್ವ ಧರ್ಮ ಸಮ್ಮೇಳನ ಹೀಗೆ ಹಲವು ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಲಕ್ಷ ದೀಪೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ದೇವಸ್ಥಾನ, ಹೆಗ್ಗಡೆಯವರ ನಿವಾಸ, ಅನ್ನಪೂರ್ಣ ಛತ್ರ, ಬಸದಿ, ರಾಜಬೀದಿ, ರಥ ಬೀದಿ ಹಾಗೂ ಕ್ಷೇತ್ರದ ಎಲ್ಲ ಕಡೆ ತಳಿರು, ತೋರಣ, ವಿದ್ಯುದ್ದೀಪಗಳಿಂದ ಅಲಂಕೃತಗೊಂಡಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವರ್ಷಂಪ್ರತಿ ನಡೆಯುವ ಲಕ್ಷದೀಪೋತ್ಸವ ಈ ಬಾರಿಯೂ ಅದ್ದೂರಿಯಾಗಿ ನಡೆಯಲಿದೆ. ಮಂಜುನಾಥನಿಗೆ ಅತಿ ಪ್ರಿಯವಾದ ಈ ದೀಪೋತ್ಸವಕ್ಕೆ ಹಿಂದಿನ ಕಾಲದಲ್ಲಿ ಮಂಜುನಾಥನ ಸನ್ನಿಧಿಯ ಸುತ್ತಲೂ ಒಂದು ಲಕ್ಷದೀಪಗಳನ್ನು (ಮಣ್ಣಿನ ಹಣತೆಗಳನ್ನು) ಉರಿಸಿತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗುತ್ತದೆ. ಹೀಗಾಗಿ ಧರ್ಮಸ್ಥಳ ಮಂಜುನಾಥನ ಸನ್ನಿಧಿ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತದೆ.

ಕಾರ್ತಿಕ ಮಾಸದಂದು ಈ ಲಕ್ಷ ದೀಪೋತ್ಸವ ನಡೆಯುತ್ತಿದ್ದು ಕ್ಷೇತ್ರದ ದೇವರಾದ ಮಂಜುನಾಥ ಈ ಸಂದರ್ಭದಲ್ಲಿ ಕ್ಷೇತ್ರದಿಂದ ಹೊರಗೆ ಸಂಚರಿಸುತ್ತಾರೆ. ವಿವಿಧ ಪ್ರದೇಶಗಳಿಂದ ಮಂಜುನಾಥನ ಮೂರ್ತಿಯೊಂದಿಗೆ ಮೆರವಣಿಗೆ ಸಾಗಿ ಪ್ರಮುಖ ಐದು ಕಟ್ಟೆಗಳ್ಳಿ ವಿಶೇಷ ಪೂಜೆ ಪಡೆಯುತ್ತಾರೆ. ದೀಪೋತ್ಸವದ ಪ್ರಯುಕ್ತ ಬೆಳ್ಳಿಯ ರಥೋತ್ಸವವೂ ಈ ಸಂಧರ್ಭ ಅದ್ದೂರಿಯಾಗಿ ನಡೆಯಿಲಿದೆ. ದೇಶ ವಿದೇಶಗಳಿಂದ ಆಗಮಿಸಲಿರುವ ಲಕ್ಷಾಂತರ ಮಂದಿ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥತಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯಲಿವೆ. ಎಲ್ಲಾದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ ವರ್ಷದ ದೀಪೋತ್ಸವವು ಡಿ.10 ರಿಂದ ಡಿ. 14ರವರೆಗೆ ನಡೆಯಲಿದೆ. ಬನ್ನಿ ಸಂಭ್ರಮದಲ್ಲಿ ಪಾಲ್ಗೊಳ್ಳೋಣ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top