fbpx
ಸಮಾಚಾರ

ಮೇಘನಾರಾಜ್ ತಾಯಿ, ಹಿರಿಯ ನಟಿ ಪ್ರಮೀಳಾ ಜೋಷಾಯ್ ಆಸ್ಪತ್ರೆಗೆ ದಾಖಲು

ಮೇಘನಾರಾಜ್ ತಾಯಿ, ಹಿರಿಯ ನಟಿ ಪ್ರಮೀಳಾ ಜೋಷಾಯಿ ಅನಾರೋಗ್ಯದ ಕಾರಣದಿಂದ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ಮಾಡಿಕೊಂಡಾಗ ವೈರಾಣು ತಗುಲಿರುವುದು ವರದಿಯಲ್ಲಿ ದೃಢಪಟ್ಟಿದೆ. ಸಧ್ಯ ನಟಿ ಪ್ರಮೀಳಾ ಜೋಷಾಯ್‍ ಆರೋಗ್ಯವಾಗಿದ್ದು ವೈದ್ಯರ ಸಲಹೆಯಂತೆ ಐಸೋಲೇಷನ್ ನಲ್ಲಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಪ್ರಮೀಳಾ ಜೋಷಾಯ್‌ ಅವರಿಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ಮತ್ತೊಂದು ಬೇಸರದ ಸುದ್ದಿ ಕೇಳಿಬಂದಿದೆ. ಮೇಘನಾ ರಾಜ್‌ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್‌ ವಾಸಿಟಿವ್‌ ಆಗಿದೆ! ಅಲ್ಲದೆ, ಸುಂದರ್‌ ರಾಜ್‌ ಅವರಿಗೂ ಸೋಂಕು ತಗುಲಿರುವುದು ಖಚಿತವಾಗಿದೆ! ಮಂಗಳವಾರ ಸುಂದರ್‌ ರಾಜ್‌ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top