RCBತಂಡದ ಸ್ಟಾರ್ ಆಟಗಾರರಲ್ಲಿ ಒಬ್ಬರಾಗಿದ್ದ, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಪಾರ್ಥಿವ್ ಪಟೇಲ್ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಪಾರ್ಥಿವ್ ಪಟೇಲ್ ಅವರ 18 ವರ್ಷದ ಕ್ರಿಕೆಟ್ ವೃತ್ತಿ ಜೀವನ ಮುಕ್ತಾಯಗೊಂಡಿದೆ. ಈ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿರುವ 35ರ ಹರೆಯದ ಪಾರ್ಥಿವ್ ಪಟೇಲ್, 18 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಘೋಷಿಸುವುದಾಗಿ ತಿಳಿಸಿದ್ದಾರೆ.
18 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಘೋಷಿಸುವುದಾಗಿ ತಿಳಿಸಿದ್ದಾರೆ. ಅಂತೆಯೇ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ತಮಗೆ ನೇರವಾಗಿ ಮತ್ತು ಪರೋಕ್ಷವಾಗಿ ನೆರವಾದ ಎಲ್ಲರಿಗೂ ಧನ್ಯವಾದ ಹೇಳುವುದಾಗಿ ಪಾರ್ಥೀವ್ ಪಟೇಲ್ ಹೇಳಿದ್ದಾರೆ.
ಪಾರ್ಥಿವ್ ಪಟೇಲ್ 25 ಟೆಸ್ಟ್, 38 ಏಕದಿನ ಹಾಗೂ ಎರಡು ಟ್ವೆಂಟಿ-20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲದೆ ಟೆಸ್ಟ್ ಹಾಗೂ ಏಕದಿನದಲ್ಲಿ ಅನುಕ್ರಮವಾಗಿ ಆರು ಹಾಗೂ ನಾಲ್ಕು ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೊನೆಯದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದರು.
— parthiv patel (@parthiv9) December 9, 2020
2002ರ ಭಾರತ ಜೂನಿಯರ್ ವಿಶ್ವಕಪ್ ತಂಡದ ಕ್ಯಾಪ್ಟನ್ ಆಗಿದ್ದ ಅವರು ಅದೇ ವರ್ಷ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿ ಬಹಳ ಕ್ಷಿಪ್ರವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಆಗ ಅವರ ವಯಸ್ಸು 17 ವರ್ಷ 153 ದಿನ. ವಿಶ್ವದ ಅತಿ ಕಿರಿಯ ವಯಸ್ಸಿನ ವಿಕೆಟ್ ಕೀಪರ್ ಎಂಬ ದಾಖಲೆ ಬರೆದರು. ರಣಜಿ ತಂಡಕ್ಕೆ ಆಯ್ಕೆಯಾಗುವ 2 ವರ್ಷ ಮುನ್ನವೇ ಅವರು ಇಂಟರ್ನ್ಯಾಷನಲ್ ಟೆಸ್ಟ್ಗೆ ಕಾಲಿಟ್ಟಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
