fbpx
ಸಮಾಚಾರ

“ರೈತರ ಹೋರಾಟದ ಹಿಂದೆ ಪಾಕ್, ಚೀನಾದ ಕೈವಾಡವಿದೆ” ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ

ಕೇಂದ್ರದ ನೂತನ ಕೃಷಿ ಕಾನೂನುಗಳ ಜಾರಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ, ಪಾಕಿಸ್ತಾನ ಹಾಗೂ ಚೀನಾ ಬೆಂಬಲವಿದೆ ಎಂದು ಕೇಂದ್ರ ಸಚಿವ ರಾವ್‌ಸಾಹೇಬ್ ಧನ್ವೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ ನಾಲಿಗೆ ಹರಿಬಿಟ್ಟಿರುವ ಸಚಿವ ರಾವಾಸೇಹಬ್ ” ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಪಾಕ್ ಹಾಗೂ ಚೀನಾ ಕುಮ್ಮಕ್ಕು ನೀಡುತ್ತಿವೆ. ಈ ಎರಡೂ ರಾಷ್ಟ್ರಗಳು ಪ್ರತಿಭಟನೆಗೆ ಹಣಕಾಸಿನ ನೆರವು ಒದಗಿಸುತ್ತಿವೆ” ಎಂದು ರಾವ್‌ಸಾಹೇಬ್ ಧನ್ವೆ ಆರೋಪಿಸಿದ್ದಾರೆ.

 

 

ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ರಾವ್‌ಸಾಹೇಬ್‌ ಧನ್ವೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸಿಖ್‌ ಗುರುದ್ವಾರಗಳು ಮತ್ತು ಶಿವಸೇನೆ ತೀವ್ರ ರೀತಿಯಲ್ಲಿ ಪ್ರತಿಕ್ರಿಯಿಸಿವೆ. ಇದು ನಾಚಿಕೆಗೇಡಿನ ವಿಷಯ ಎಂದು ಕಿಡಿಕಾರಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಶಿವಸೇನೆ ಸಂಸದ ಸಂಜಯ್ ರಾವತ್ “ರೈತರ ಆಂದೋಲನದ ಹಿಂದೆ ಚೀನಾ ಮತ್ತು ಪಾಕಿಸ್ತಾನದ ಕೈವಾಡವಿದೆ ಎಂದು ಕೇಂದ್ರ ಸಚಿವರಿಗೆ ಮಾಹಿತಿ ಇದ್ದರೆ, ರಕ್ಷಣಾ ಸಚಿವರು ತಕ್ಷಣ ಚೀನಾ ಮತ್ತು ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು. ಸಶಸ್ತ್ರ ಪಡೆಗಳ ಅಧ್ಯಕ್ಷರು, ಪ್ರಧಾನಿ, ಗೃಹಸಚಿವರು ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕು” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top